Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಮಾತೃ ಹೃದಯದ ವಿಐಎಸ್‌ಎಲ್ ಉಳಿವಿಗೆ ಸರ್ಕಾರ ಮುಂದಾಗುವುದೇ?

ಜನರ ಉಸಿರು ಉಳಿಸಲು ಪ್ರಾಣವಾಯು ನೀಡುತ್ತಿರುವ ವಿಐಎಸ್’ಎಲ್'ನ ಜೀವ ಉಳಿಸಬೇಕಿದೆ

May 14, 2021
in Special Articles, ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ಒಂದು ಕಾಲದಲ್ಲಿ ಭದ್ರಾವತಿ ಕ್ಷೇತ್ರದ ಅಸಂಖ್ಯಾತ ಜನರಿಗೆ ಉದ್ಯೋಗ ಒದಗಿಸಿ, ಸಾವಿರಾರು ಕುಟುಂಬಗಳಿಗೆ ಬದುಕು ನೀಡಿ, ಅನ್ನದಾತ ಸಂಸ್ಥೆಯಾಗಿದ್ದ ಸರ್.ಎಂ.ವಿ. ಸಂಸ್ಥಾಪಿತ ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಇಂದು ತನ್ನ ಗತಕಾಲದ ವೈಭವವನ್ನು ಕಳೆದುಕೊಂಡು, ತನ್ನ ಅಸ್ಥಿತ್ವವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೆಣಗಾಡುತ್ತಾ ನೋವಿನ ಸ್ಥಿತಿಯಲ್ಲಿದೆ.

ಆದರೂ ಸಹ ಕೊರೋನಾ ಸಂಕಷ್ಠದಿಂದ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಜನರ ಪ್ರಾಣ ಉಳಿಸುವ ಸಲುವಾಗಿ ತನ್ನ ಪ್ರಾಂಗಣದಲ್ಲಿರುವ ಆಮ್ಲಜನಕ ಉತ್ಪಾದನಾ ಘಟಕದಿಂದ ಆಸ್ಪತ್ರೆಗೆ ಆಕ್ಸಿಜನ್ ಸರಬರಾಜು ಮಾಡುವ ಸೇವಾ ಕಾರ್ಯಕ್ಕೆ ಹೆಗಲು ನೀಡಿ ನಿಜವಾದ ಅರ್ಥದಲ್ಲಿ ಕೋವಿಡ್ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದೆ.
ಕಾರ್ಖಾನೆಯ ಅಂಗಳದಲ್ಲಿ ಹಲವು ದಶಕಗಳ ಹಿಂದೆ ಉತ್ತರ ಭಾರತ ಮೂಲದ ಬಾಲ್ ದೋಟ್ ಮಾಲೀಕತ್ವದ ಎಂಎಸ್‌ಪಿಎಲ್ ಕಂಪನಿಯ ಸಹಯೋಗದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕವನ್ನು ಸ್ಥಾಪಿಸಿ, ಕಾರ್ಖಾನೆಗೆ ಅಗತ್ಯವಾದ ಪ್ರಮಾಣದ ಆಕ್ಸಿಜನ್ ಉತ್ಪಾದನೆ ಮಾಡಲಾಗುತ್ತಿತ್ತು. ಆಕ್ಸಿಜನ್ ಉತ್ಪಾದನೆ ಮತ್ತು ಅವುಗಳನ್ನು ಜಂಬೋ ಸಿಲಿಂಡರ್‌ಗಳಲ್ಲಿ ತುಂಬಲು ಅಂದಿನ ಕಾಲದಲ್ಲಿಯೇ ಲಕ್ಷಾಂತರ ರೂ. ಖರ್ಚಾಗುತ್ತಿತ್ತು. ಕಾರ್ಖಾನೆ ಲಾಭದಾಯಕವಾಗಿ ನಡೆಯುತ್ತಿದ್ದರಿಂದ ಆ ವೆಚ್ಚ ಕಷ್ಟ ಎನಿಸುತ್ತಿರಲಿಲ್ಲ. ಆದರೆ ಕಾಲಕ್ರಮೇಣ ವಿಐಎಸ್‌ಎಲ್ ನಷ್ಟದ ಹಾದಿಯಲ್ಲಿ ಸಾಗಿದ ಪರಿಣಾಮ ಕಾರ್ಖಾನೆಯಲ್ಲಿ ವರ್ಷದಿಂದ ವರ್ಷಕ್ಕೆ ಕಾರ್ಮಿಕರ ಸಂಖ್ಯೆ, ಉತ್ಪಾದನೆ, ಮಾರಾಟ ಎಲ್ಲವೂ ಕುಸಿಯಿತು. ಕ್ರಮೇಣ, ಕಾರ್ಖಾನೆಯ ಹಲವು ಘಟಕಗಳು ಮುಚ್ಚುತ್ತಾ ಬಂದವು. ಅದರಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಈ ಆಕ್ಸಿಜನ್ ಘಟಕದಲ್ಲೂ ಸಹ ಎಂಎಸ್‌ಪಿಎಲ್ ಉತ್ಪಾದನೆ ಸ್ಥಗಿತಗೊಳಿಸಿ ಮುಚ್ಚಲ್ಪಟಿತ್ತು.

ವಿಐಎಸ್’ಎಲ್ ಆಕ್ಸಿಜನ್ ಉತ್ಪಾದನಾ ಘಟಕದ ಒಳನೋಟ

ಕೊರೋನಾದಿಂದ ಮತ್ತೆ ಸುದ್ಧಿಯಾದ ಆಕ್ಸಿಜನ್ ಘಟಕ
ಹೊರ ಜಗತ್ತಿನ ಬಹುತೇಕರಿಗೆ ಈ ಕಾರ್ಖಾನೆಯಲ್ಲಿ ಪಳೆಯುಳಿಕೆಯಾಗಿ ಉಳಿದ ಆಕ್ಸಿಜನ್ ಘಟಕದ ಬಗ್ಗೆ ಮರೆತು ಹೋದಂತಾಗಿತ್ತು. ಆದರೆ ಕೊರೋನಾ ಎರಡನೆಯ ಅಲೆ ಸೃಷ್ಠಿಸಿರುವ ಆಕ್ಸಿಜನ್ ಕೊರತೆಯ ಅವಾಂತರದ ಪರಿಣಾಮವಾಗಿ ಸೋಂಕಿತರಿಗೆ ಅಗತ್ಯವಾದ ಆಮ್ಲಜನಕ ಪೂರೈಕೆಯ ಕೊರತೆ ಆಸ್ಪತ್ರೆಗಳಲ್ಲಿ ಹಾಹಾಕಾರ ಉಲ್ಬಣಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಆಕ್ಸಿಜನ್ ಉತ್ಪಾದನೆಯ ಮಾತುಗಳು ಚರ್ಚೆಯಾದ ಪರಿಣಾಮವಾಗಿ ವಿಐಎಸ್’ಎಲ್ ಕಾರ್ಖಾನೆಯಲ್ಲಿ ಸ್ಥಗಿತಗೊಂಡಿರುವ ಆಕ್ಸಿಜನ್ ಘಟಕದತ್ತ ರಾಜ್ಯ ಸರ್ಕಾರದ ಚಿತ್ತ ಹರಿಯಿತು. ಕಾರ್ಖಾನೆಯ ಆಡಳಿತದ ಜೊತೆ ಮತ್ತು ಎಂಎಸ್‌ಪಿಎಲ್ ಕಂಪನಿ ಜೊತೆ ಸರ್ಕಾರ ಮಾತುಕತೆ ನಡೆಸಿದ ಪರಿಣಾಮ ವಿಐಎಸ್‌ಎಲ್ ಕಾರ್ಖಾನೆಯಲ್ಲಿನ ಆಕ್ಸಿಜನ್ ಘಟಕದಲ್ಲಿ ಆಕ್ಸಿಜನ್ ಉತ್ಪಾದನೆಗೆ ಮರು ಚಾಲನೆ ದೊರಕಿದೆ. ವಿಐಎಸ್‌ಎಲ್ ಕಂಪನಿಯಲ್ಲಿ ಲಭ್ಯವಿರುವ 1 ಕಂಪ್ರೆûಸರ್ ನೆರವಿನಿಂದ 150 ಜಂಬೋ ಸಿಲಿಂಡರ್‌ಗಳಿಗೆ ಆಕ್ಸಿಜನ್ ತುಂಬುವ ಕಾರ್ಯ ಆರಂಭವಾಗಿದೆ. ಅವುಗಳನ್ನು ಈಗಾಗಲೇ ಸರ್ಕಾರ ಅಗತ್ಯವಿರುವ ಕೋವಿಡ್ ರೋಗಿಗಳಿಗೆ ಪೂರೈಸುವುದಕ್ಕೆ ವ್ಯವಸ್ಥೆ ಮಾಡಿದೆ.
ಈ ನಿಟ್ಟಿನಲ್ಲಿ ಉತ್ಪಾದನೆಗೊಳ್ಳುವ ಆಕ್ಸಿಜನನ್ನು ಜಂಬೋ ಸಿಲಿಂಡರ್‌ಗಳಿಗೆ ತುಂಬಲು ದಿನವೊಂದಕ್ಕೆ 2 ಲಕ್ಷ ರೂ. ವಿದ್ಯುತ್ ವೆಚ್ಚವಾಗುವುದರ ಜೊತೆಗೆ ಆಕ್ಸಿಜನ್ ತಯಾರಿಕೆಗೆ ಹತ್ತು ಲಕ್ಷಕ್ಕೂ ಅಧಿಕ ರೂ. ವೆಚ್ಚವಾಗುತ್ತದೆ. ಇದನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ.

ಮಾತೃ ಹೃದಯಿ ವಿಐಎಸ್‌ಎಲ್
ಕೇಂದ್ರ ಸರ್ಕಾರ ವಿಐಎಸ್‌ಎಲ್ ಕಂಪನಿಯನ್ನು ಸಾರ್ವಜನಿಕ ವಲಯದಲ್ಲಿಯೇ ಉಳಿಸಿ ಅದಕ್ಕೆ ಮರುಜೀವ ತುಂಬಬೇಕೆಂಬ ಈ ಕ್ಷೇತ್ರದ ಜನತೆಯ ನಿರೀಕ್ಷೆ ಈವರೆಗೆ ಫಲ ನೀಡದ ಪರಿಣಾಮ ಕಾರ್ಖಾನೆ ಪುನಶ್ಚೇತನಗೊಳ್ಳದೆ ಕೋವಿಡ್ ರೋಗಿಗಿಂತ ದಯನೀಯ ಸ್ಥಿತಿಯಲ್ಲಿ ಉಸಿರಾಡುತ್ತಿದೆ. ಈ ಸಂದರ್ಭದಲ್ಲಿ ತನ್ನ ದುಃಸ್ಥಿತಿಯನ್ನೂ ಲೆಕ್ಕಿಸದೆ ತಾಯಿಯು ತನಗೆಷ್ಟೇ ಕಷ್ಟವಾದರೂ ತನ್ನ ಮಗುವಿನ ಜೀವಕ್ಕೆ ತೊಂದರೆಯಾಗದ ರೀತಿ ಮಗುವಿನ ರಕ್ಷಣೆಗೆ ಮುಂದಾಗುತ್ತಾಳೋ ಆ ರೀತಿಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ಜನರ ಬದುಕಿಗೆ ಅಗತ್ಯವಾದ ಪ್ರಾಣವಾಯು ಆಮ್ಲಜನಕವನ್ನು ಪೂರೈಸುತ್ತಿದೆ. ಈ ಕಾರ್ಯದಲ್ಲಿ ಯಶಸ್ವಿಯಾಗಿರುವ ವಿಐಎಸ್‌ಎಲ್ ಕಾರ್ಖಾನೆಯ ಸೇವಾ ಮನೋಭಾವ ನಿಜಕ್ಕೂ ಅನನ್ಯ.


ವಿಐಎಸ್‌ಎಲ್ ಉಳಿಸಲು ಕೇಂದ್ರ ಸರ್ಕಾರ ಮುಂದಾಗಬೇಕಿದೆ
ಇಂತಹ ಸೇವಾ ಮನೋಭಾವದ ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಲಾಭ-ನಷ್ಟದ ದೃಷ್ಠಿಕೋನದಲ್ಲಿ ನೋಡದೆ, ಸರ್‌ಎಂವಿ ಸಂಸ್ಥಾಪಿತವಾದ ಈ ಕಾರ್ಖಾನೆಯನ್ನು ಸಾರ್ವಜನಿಕ ವಲಯದ ಉದ್ದಿಮೆಯಾಗಿ ಉಳಿಸಿ ಬೆಳೆಸುವ ಮೂಲಕ ಕೇಂದ್ರ ಸರ್ಕಾರ ಇದರ ಋಣವನ್ನು ಸ್ವಲ್ಪವಾದರೂ ತೀರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕಿದೆ. ಇದಕ್ಕೆ ರಾಜ್ಯ ಸರ್ಕಾರ ತನ್ನ ಎಲ್ಲಾ ಶಕ್ತಿ, ಪ್ರಭಾವವನ್ನು ಬಳಸಿ ಕೇಂದ್ರ ಸರ್ಕಾರದ ಮನವೊಲಿಸುವ ಕಾರ್ಯವನ್ನು ಕೋವಿಡ್ ಸಂಕಷ್ಟದ ದಿನಗಳು ಕಳೆದ ನಂತರ ಮಾಡಬಹುದೆಂಬ ಆಶಾಭಾವನೆ ಈ ಕ್ಷೇತ್ರದ ಜನತೆಯ ಮನದಲ್ಲಿ ಮೂಡಿದೆ. ಉಪಕಾರ ಮಾಡಿದರಿಗೆ ಪ್ರತ್ಯುಪಕಾರ ಮಾಡುವುದು ಕರ್ತವ್ಯ. ಈ ನಿಟ್ಟಿನಲ್ಲಿ ಕೋವಿಡ್ ಸಂಕಷ್ಠದಲ್ಲಿ ಪ್ರಾಣ ಉಳಿಸಲು ಸಹಾಯ ಮಾಡಿರುವ ವಿಐಎಸ್‌ಎಲ್ ಪ್ರಾಣ ಉಳಿಸುವ ಜವಾಬ್ದಾರಿಯುತ ಕರ್ತವ್ಯದ ಋಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲಿದೆ.

(ಲೇಖನ: ಕೋ.ಶ್ರೀ. ಸುಧೀಂದ್ರ, ಭದ್ರಾವತಿ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiFactoryJumbo CylinderKannada News WebsiteLatest News KannadaOxygenOxygen production plantSAILShimogaShivamoggaShivamogga NewsVISLಆಕ್ಸಿಜನ್ಆಮ್ಲಜನಕ ಉತ್ಪಾದನಾ ಘಟಕಕಾರ್ಖಾನೆಕೊರೋನಾ 2ನೆಯ ಅಲೆಕೊರೋನಾ ವೈರಸ್ಜಂಬೋ ಸಿಲಿಂಡರ್‌ಭದ್ರಾವತಿಮಲೆನಾಡು ಸುದ್ಧಿವಿಐಎಸ್‌ಎಲ್ಶಿವಮೊಗ್ಗ ನ್ಯೂಸ್
Previous Post

ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಕೊರೋನಾಗೆ ಬಲಿ: ಗಣ್ಯರ ಕಂಬನಿ

Next Post

ರಾಜಕಾರಣದ ಸ್ಥಿತ್ಯಂತರಗಳ ನಿಖರ ವಿಶ್ಲೇಷಕ ಮಹದೇವ ಪ್ರಕಾಶ್ ಅಗಲಿಕೆ ಸುದ್ದಿಲೋಕದ ಅಪಾರ ನಷ್ಟ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಜಕಾರಣದ ಸ್ಥಿತ್ಯಂತರಗಳ ನಿಖರ ವಿಶ್ಲೇಷಕ ಮಹದೇವ ಪ್ರಕಾಶ್ ಅಗಲಿಕೆ ಸುದ್ದಿಲೋಕದ ಅಪಾರ ನಷ್ಟ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!