ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಬಹಳಷ್ಟು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಸೇವೆ ಸಲ್ಲಿಸಿರುವ ಹೊಸಮನೆ ನಿವಾಸಿ ಅವಿನಾಶ್ ಅವರನ್ನು ಪಕ್ಷದ ಮಾಧ್ಯಮ ವಿಭಾಗದ ರಾಜ್ಯ ಸಮಿತಿ ಸದಸ್ಯರಾಗಿ ನೇಮಕ ಮಾಡಲಾಗಿದೆ.ಈ ಕುರಿತಂತೆ ಅವಿನಾಶ್ ಅವರನ್ನು ನೇಮಕಾತಿಗೊಳಿಸಿ ಆದೇಶ ಹೊರಡಿಸಲಾಗಿದ್ದು, ಪಕ್ಷಕ್ಕೆ ಇವರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ನೇಮಕಾತಿಗೊಳಿಸಲಾಗಿದೆ.
ಎಂಬಿಎ ಓದಿರುವ ಅವಿನಾಶ್ ಅವರು, ಪಕ್ಷದ ಸಾಮಾಜಿಕ ಜಾಲತಾಣದ ನಿರ್ವಹಣೆಯಲ್ಲಿ ಹಲವು ವರ್ಷಗಳಿಂದ ತೊಡಗಿಸಿಕೊಂಡಿದ್ದು, ಜಿಲ್ಲಾ ಸಾಮಾಜಿಕ ಜಾಲತಾಣದ ವಿಭಾಗದ ಸಂಚಾಲಕರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಅವಿನಾಶ್ ಅವರಿಗೆ, ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post