ಭದ್ರಾವತಿ: ಜಿಪಂ, ತಾಪಂ ಹಾಗು ನಗರದ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸ್ವಚ್ಚ ಮೇವ ಜಯತೆ ಮತ್ತು ಜಲಾಮೃತ ಶನಿವಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದ ಆರಂಭಗೊಂಡ ಮೆರವಣಿಗೆ ಜಾಥಾಗೆ ಶಾಸಕ ಬಿ.ಕೆ. ಸಂಗಮೇಶ್ವರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಸದಸ್ಯರಾದ ವೀರಭದ್ರಪ್ಪ ಪೂಜಾರ್, ತಾಪಂ ಅಧ್ಯಕ್ಷೆ ಆಶಾ, ತಾಪಂ ಇಒ ತಮ್ಮಣ್ಣಗೌಡ, ಬಿಇಓ ಎಂ.ಸಿ.ಆನಂದ್, ಸಿಡಿಪಿಒ ಸುರೇಶ್, ವಿವಿಧ ಇಲಾಖಾಧಿಕಾರಿಗಳಾದ ಕೇಶವಮೂರ್ತಿ, ನೀಲೇಶ್ ರಾಜ್ ಸೇರಿದಂತೆ ಅನೇಕ ಅಧಿಕಾರಿಗಳು, ಶಿಕ್ಷಕರು, ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪರಿಸರ ಉಳಿಸಿ, ನೀರು ಮಿತವಾಗಿ ಬಳಸಿ ಇತ್ಯಾದಿ ಗೋಷಣೆಗಳನ್ನು ಹೊತ್ತ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗು ಸಾವಿರಾರು ವಿದ್ಯಾರ್ಥಿಗಳು ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದ ಡಾ.ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಡಾ.ರಾಜಕುಮಾರ್ ರಸ್ತೆ, ಮಾಧವಚಾರ್ ವೃತ್ತ, ರಂಗಪ್ಪ ವೃತ್ತದ ಮೂಲಕ ಕನಕ ಮಂಟಪ ಮೈದಾನದಲ್ಲಿ ಮೆರವಣಿಗೆ ಅಂತಿಮ ಗೊಳಿಸಿದರು.
(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)
Discussion about this post