ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಸಂವಿಧಾನಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಾಜಮುಖಿ ಚಿಂತನೆಗಳು ಎಲ್ಲಾ ಕಾಲಕ್ಕೂ ಪ್ರಸ್ತುತ ಎಂದು ತಾಲೂಕು ಆದಿ ದ್ರಾವಿಡ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಗೋಪಾಲ್ ಅಭಿಪ್ರಾಯಪಟ್ಟರು.
ಅಂಬೇಡ್ಕರ್ ಜಯಂತಿ ಅಂಗವಾಗಿ ಅಂಡರ್ ಬ್ರಿಡ್ಜ್ ಬಳಿಯಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.
ದಶಕಗಳ ಕಾಲ ಶೋಷಣೆಗೆ ಒಳಗಾಗಿದ್ದ, ಸಮುದಾಯಗಳಿಗೆ ನ್ಯಾಯ ಒದಗಿಸುವ ಮೂಲಕ ಜಾತ್ಯಾತೀತ ಸಮಾಜಕ್ಕೆ ಬಾಬಾ ಸಾಹೇಬರು ಬುನಾದಿ ಹಾಕಿದ್ದಾರೆ. ಮಾತ್ರವಲ್ಲ ಪ್ರಪಂಚದಲ್ಲೇ ಬೃಹತ್ ಸಂವಿಧಾನವನ್ನು ನಮ್ಮ ದೇಶಕ್ಕೆ ಕೊಡುಗೆಯಾಗಿ ನೀಡಿರುವ ಹೆಗ್ಗಳಿಕೆ ಬಾಬಾ ಸಾಹೇಬರಿಗೆ ಸಲ್ಲಿಸುವುದು ಸಂತಸ ಎಂದರು.
ಅಂಬೇಡ್ಕರ್ ಪ್ರತಿಮೆ ಮಾಲಾರ್ಪಣೆ ಮಾಡಿದ ನಂತರ ಸಾರ್ವಜನಿಕರಿಗೆ ಸಿಹಿ ಹಂಚಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post