ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಂದು ನಡೆಯಬೇಕಿದ್ದ ಭದ್ರಾವತಿ ನಗರಸಭೆ ಉಪಾಧ್ಯಕ್ಷರ ಚುನಾವಣೆಯನ್ನು ಬಂದ್ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.
ಖಾಲಿ ಇದ್ದ ಉಪಾಧ್ಯಕ್ಷರ ಸ್ಥಾನಕ್ಕೆ ಇಂದು ಚುನಾವಣೆ ನಿಗಧಿಯಾಗಿತ್ತು. ಕಾಂಗ್ರೆಸ್‌ನಿಂದ ಸರ್ವಮಂಗಳ ಬೈರಪ್ಪ ಅವರು, ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆಗಳು ನಗರಸಭೆ ಕಚೇರಿಯಲ್ಲಿ ನಡೆಯುತ್ತಿತ್ತು. ಇನ್ನೊಂದೆಡೆ ವಿಐಎಸ್‌ಎಲ್ ಉಳಿವಿಗಾಗಿ ಭದ್ರಾವತಿ ಸಂಪೂರ್ಣ ಬಂದ್‌ಗೆ ಕರೆ ನೀಡಲಾಗಿತ್ತು.
ಬಂದ್ ನಡುವೆಯೇ ಚುನಾವಣಾ ಪ್ರಕ್ರಿಯೆ ನಡೆಸುತ್ತಿದ್ದ ನಗರಸಭೆ ಅಧಿಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು. ಕಾರ್ಖಾನೆ ಮಾತ್ರವಲ್ಲ ಇಡೀ ಭದ್ರಾವತಿ ಉಳಿವಿಗಾಗಿ ಬಂದ್ ನಡೆಸಲಾಗುತ್ತಿದೆ. ಇದರ ನಡುವೆ ಕೇವಲ ರಾಜಕೀಯ ಲಾಭಕ್ಕಾಗಿ ಚುನಾವಣೆ ನಡೆಸುತ್ತಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

Also read: ಭದ್ರಾವತಿ ಬಂದ್ ಸಂಪೂರ್ಣ ಯಶಸ್ವಿ: ವ್ಯಾಪಾರ ವಹಿವಾಟು ಸ್ಥಗಿತ, ಕಾರ್ಖಾನೆ ಮುಚ್ಚದಂತೆ ಒಕ್ಕೊರಲಿನ ಆಗ್ರಹ












Discussion about this post