ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ನಗರದಲ್ಲಿ ಫೆ.28ರಂದು ನಡೆದ ಗಲಾಟೆ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ ಶಾಸಕ ಬಿ.ಕೆ.ಸಂಗಮೇಶ್ವರ್ ಪುತ್ರ ಬಸವೇಶ್ ಅವರಿಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಫೆ.27 ಮತ್ತು 28 ರಂದು ಭದ್ರಾವತಿಯ ಕನಕ ಮಂಟಪದಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿರುವುದಕ್ಕೆ ತಾಲೂಕು ಬಿಜೆಪಿ ಮುಖಂಡ ಧರ್ಮಪ್ರಸಾದ್ ಮತ್ತು ಅವರ ಗುಂಪಿನ ಮೇಲೆ ಶಾಸಕರ ಪರ ಬೆಂಬಲಿಗರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ನಡೆದಿತ್ತು.

ಈ ಘಟನೆಯಲ್ಲಿ ಸಂಗಮೇಶ್ವರ್ ಪುತ್ರ ಬಸವೇಶ್ ಹಾಗೂ ಇತರೆ 15 ಜನರ ವಿರುದ್ಧ 307 ಮತ್ತು ಜಾತಿನಿಂದನೆ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಬಸವೇಶ್ ಸೇರಿದಂತೆ 15 ಜನರನ್ನ ಮಾ.6 ರಂದು ಪೊಲೀಸರು ಬಂಧಿಸಿದ್ದರು.
ಬಸವ ಅವರ ಜಾಮೀನು ಅರ್ಜಿಯನ್ನು ಸ್ಥಳೀಯ ಭದ್ರಾವತಿ ಮತ್ತು ಶಿವಮೊಗ್ಗ ನ್ಯಾಯಾಲಯ ತಿರಸ್ಕರಿಸಿತ್ತು. ಜಾಮೀನು ಅರ್ಜಿಯನ್ನ ನ್ಯಾಯಾಲಯ ತಿರಸ್ಕರಿಸಿದ ಹಿನ್ನಲೆಯಲ್ಲಿ ಬೆಂಗಳೂರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ಹೈಕೋರ್ಟ್ ಜಾಮೀನು ನೀಡಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















