ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ನಗರದ ಬಜರಂಗದಳ ಕಾರ್ಯಕರ್ತರು ದತ್ತಮಾಲೆ ಧರಿಸಿ ಚಂದ್ರದ್ರೋಣ ಪರ್ವತದಲ್ಲಿ ದತ್ತ ಸ್ವಾಮಿಯ ಪಾದುಕೆಗಳ ದರ್ಶನ ಸಲ್ಲಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ವಿಶ್ವ ಹಿಂದೂ ಪರಿಷತ್-ಬಜರಂಗದಳದ ನೇತೃತ್ವದಲ್ಲಿ ದತ್ತ ಜಯಂತಿ ಅಂಗವಾಗಿ ದತ್ತ ಮಾಲಾ ಅಭಿಯಾನ ನಡೆಸಲಾಗುತ್ತಿದೆ. ಈ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಭದ್ರಾವತಿ ಪ್ರಖಂಡ ವತಿಯಿಂದ ನೂರಾರು ಬಜರಂಗದಳ ಕಾರ್ಯಕರ್ತರು ಚಿಕ್ಕಮಂಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯ ದತ್ತಪೀಠದಲ್ಲಿ ದತ್ತ ಸ್ವಾಮಿಯ ಪಾದುಕೆ ದರ್ಶನ ಪಡೆದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post