ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನ 5 ಶಿಕ್ಷಕರಿಗೆ ಈ ಬಾರಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ Best Teacher Award ಲಭಿಸಿದೆ.
ಕಿರಿಯ ಪ್ರಾಥಮಿಕ ವಿಭಾಗದಲ್ಲಿ ತಾಲೂಕಿನ ಅರಹತೊಳಲು ವಡ್ಡರಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಕೆ.ಎಂ ಶಿವಕುಮಾರ್, ಹಿರಿಯ ಪ್ರಾಥಮಿಕ ವಿಭಾಗದಲ್ಲಿ ವಿಶ್ವನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಕೆ.ಎನ್ ರಂಗನಾಥ್, ಕಾಗದನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಫರೀದುನ್ನೀಸ, ಸಿದ್ಲೀಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಡ್ತಿ ಮುಖ್ಯ ಶಿಕ್ಷಕ ಎಚ್. ಡಾಕ್ಯಾನಾಯ್ಕ ಹಾಗೂ ಪ್ರೌಢಶಾಲೆ ವಿಭಾಗದಲ್ಲಿ ಅರಕೆರೆ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಬಬಿತ ಕುಮಾರಿ ಅವರಿಗೆ ಈ ಬಾರಿ ಪ್ರಶಸ್ತಿ ಲಭಿಸಿದೆ.
ಪ್ರೌಢಶಾಲೆ ವಿಭಾಗದಲ್ಲಿ ತಾಲೂಕಿನ ಅರಕೆರೆ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಬಬಿತ ಕುಮಾರಿ ಅವರಿಗೆ ಈ ಬಾರಿ ಪ್ರಶಸ್ತಿ ಲಭಿಸಿದೆ. ಬಬಿತ ಕುಮಾರಿ ಅವರು ಹಿಂದಿ ಭಾಷಾ ಶಿಕ್ಷಕಿಯಾಗಿದ್ದಾರೆ. ಮೂಲತಃ ಶಿವಮೊಗ್ಗದವರಾದ ಇವರು ಹೊಸನಗರ ತಾಲೂಕಿನ ಕಾರಣಗಿರಿ ಸರ್ಕಾರಿ ಪ್ರೌಢಶಾಲೆಯಲ್ಲಿ 2003ರಲ್ಲಿ ಶಿಕ್ಷಕ ವೃತ್ತಿಗೆ ಸೇರ್ಪಡೆಗೊಂಡಿದ್ದು, ಇಲ್ಲಿ ಸುಮಾರ 7 ವರ್ಷ ಕರ್ತವ್ಯ ನಿರ್ವಹಿಸಿದ್ದಾರೆ. ನಂತರ ಚಿಕ್ಕಜೇನಿ ಶಾಲೆಯಲ್ಲಿ 8 ವರ್ಷ ಹಾಗು 2019ರಿಂದ ತಾಲೂಕಿನ ಅರಕೆರೆ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಹಿಂದಿ ಭಾಷಾ ವಿಷಯದಲ್ಲಿ ಅತ್ಯುತ್ತಮ ಫಲಿತಾಂಶ ನೀಡುವುದರ ಜೊತೆಗೆ, ಇಲಾಖೆಯ ಎಲ್ಲಾ ಕೆಲಸಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡು ಎಲ್ಲಾರಿಂದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸಾಂಸ್ಕೃತಿಕ ಹಾಗೂ ಕ್ರೀಡೆಯಲ್ಲಿ ಮಕ್ಕಳಿಗೆ ತರಬೇತಿ ನೀಡುವುದರ ಜೊತೆಗೆ, ಇಲಾಖೆಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಯಶಸ್ಸು ಶಾಲೆಗೆ ಯಶಸ್ಸು ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ತಾಲೂಕಿನ ವಿಶ್ವನಗರ ಶಾಲೆಯ ಕೆ ಎನ್. ರಂಗನಾಥ ರವರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದ್ದು, ಇವರು ಬಹುಮುಖ ಪ್ರತಿಭೆ ಶಿಕ್ಷಕರಾಗಿದ್ದಾರೆ. ಜಾನಪದ ಸೋಬಾನೆ ಕಲಾವಿದರಾದ ನಾಗರಾಜಪ್ಪ ಜಿ.ಕೆ ಮತ್ತು ರತ್ನಮ್ಮ ದಂಪತಿ ಪುತ್ರರಾಗಿದ್ದು, ಸಾಹಿತ್ಯ, ಹಾಡು, ಅಭಿನಯ, ಚಿತ್ರಕಲೆ, ಇತ್ಯಾದಿ ಬಹುಮುಖ ಪ್ರತಿಭೆ ಇವರದ್ದಾಗಿದೆ. ರಂಗನಾಥ್ ಅವರು ಕ್ಲಸ್ಟರ್, ತಾಲೂಕು ಹಾಗೂ ಜಿಲ್ಲಾ ಸಂಪನ್ಮೂಲ ವ್ಯಕ್ತಿಯಾಗಿ ಕೆಲಸ ಮಾಡಿದ್ದು, ಅಲ್ಲದೆ ಕಲೆ, ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಮಕ್ಕಳನ್ನು ಗುರುತಿಸಿ, ಪ್ರೋತ್ಸಾಹ ನೀಡುವ ಕಾರ್ಯದಲ್ಲಿ ತೊಡಗಿಸಿ ಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post