ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನ ಅಂತರಗಂಗೆಯಲ್ಲಿ ವ್ಯಕ್ತಿಯೋರ್ವರ ಮೇಲೆ ಕರಡಿ ದಾಳಿ ನಡೆಸಿದ ಘಟನೆ ನಡೆದಿದೆ.
ಕೆ.ಎಚ್. ನಗರದ ನಿವಾಸಿ ದೇವೇಂದ್ರಪ್ಪ ಎಂಬುವವರ ಮೇಲೆ ಶುಕ್ರವಾರ ಕರಡಿ ದಾಳಿ ನಡೆಸಿದ್ದು, ತೀವ್ರ ಗಾಯಗೊಂಡ ಇವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Also read: ಚನ್ನಪಟ್ಟಣ ಉಪಚುನಾವಣೆ | ನಿಖಿಲ್ ಕುಮಾರಸ್ವಾಮಿ ಪರ ಬಂಡೆಪ್ಪ ಖಾಶೆಂಪುರ್ ಮತಯಾಚನೆ
ದೇವೇಂದ್ರಪ್ಪ ಟೈಲರ್ ವೃತ್ತಿ ಮಾಡುತ್ತಿದ್ದು, ಶುಕ್ರವಾರ ಬಿಸಿಲುಮನೆ ಗ್ರಾಮದಲ್ಲಿರುವ ನಿವೇಶನ ನೋಡಿಕೊಂಡು ಮನೆಗೆ ಹಿಂದಿರುಗುವ ವೇಳೆ ದಾರಿಯಲ್ಲಿ ಎದುರಾದ ಕರಡಿ ದಾಳಿ ನಡೆಸಿದೆ. ದಾಳಿಯಿಂದ ತಪ್ಪಿಸಿಕೊಂಡು ಬಂದ ದೇವೇಂದ್ರಪ್ಪ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















