ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕಡಜದ ಹುಳುಗಳ ದಾಳಿಯಿಂದ ಕಳೆದ ಕೆಲವು ದಿನಗಳ ಹಿಂದೆ ಇಬ್ಬರು ಮೃತಪಟ್ಟಿದ್ದರು. ಇದೀಗ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ತಾಲೂಕಿನ ಉಕ್ಕುಂದ ಗ್ರಾಮದ ನಿವಾಸಿ, ಕೃಷಿ ಕೂಲಿ ಕಾರ್ಮಿಕ ಕುಮಾರ್ (38) ಮೃತಪಟ್ಟವರಾಗ್ಗಿದ್ದು, ಇವರು ಭಾನುವಾರ ಬೆಳಿಗ್ಗೆ ಕೆಂಚಮ್ಮನಹಳ್ಳಿಯ ರಂಗಪ್ಪ ಎನ್ನುವವರ ತೆಂಗಿನ ತೋಟದಲ್ಲಿ ಕಾಯಿ ಕೀಳುವ ಕೆಲಸ ಮಾಡುತ್ತಿದ್ದಾಗ ಕಡಜದ ಹುಳುಗಳು ದಾಳಿ ನಡೆಸಿದ್ದು, ತೀವ್ರ ಅಸ್ವಸ್ಥಗೊಂಡಿದ್ದ ಕುಮಾರ್ ಅವರನ್ನು ನಗರದ ದುರ್ಗಾ ನರ್ಸಿಂಗ್ ಹೋಂಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ನಾರಾಯಣ ಹೃದಯಾಲಕ್ಕೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಿಗಿನ ಜಾವ ಮೃತಪಟ್ಟಿದ್ದಾರೆ.
ಮೃತ ಕುಮಾರ್ ಪತ್ನಿ, ಒಂದು ಗಂಡು ಮತ್ತು ಒಂದು ಹೆಣ್ಣು ಮಕ್ಕಳನ್ನು ಹೊಂದಿದ್ದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post