ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ನಗರದ ಹಳೇ ಸೀಗೆಬಾಗಿ ವೃತ್ತದ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಖಲೀಲ್ ವುಲ್ಲಾ ಎಂಬುವವರು ದ್ವಿಚಕ್ರ ವಾಹನ ಚಲಾಯಿಸಿಕೊಂಡು ಹೋಗುತ್ತಿರುವಾಗ ರಂಗಪ್ಪ ವೃತ್ತದ ಬಳಿ ಸಿಎನ್ ರಸ್ತೆ ಕಡೆಯಿಂದ ಬಂದ ಕಾರು ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಚಾಲಕನ ತಲೆ ಮತ್ತು ಕಾಲಿಗೆ ತೀವ್ರ ತರಹದ ಪೆಟ್ಟಾಗಿತ್ತು. ಚಿಕಿತ್ಸೆಗಾಗಿ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕಾರನ್ನು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಭದ್ರಾವತಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post