ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಬಿ.ವೈ. ರಾಘವೇಂದ್ರ ಅಭಿಮಾನಿಗಳ ಬಳಗದಿಂದ ತಾಪಂ ಸದಸ್ಯ, ಬಿಜೆಪಿ ಪಕ್ಷದ ಯುವ ಮುಖಂಡ ಕೆ. ಮಂಜುನಾಥ್ ನೇತೃತ್ವದಲ್ಲಿ ಸಂಸದ ರಾಘವೇಂದ್ರ ಹುಟ್ಟುಹಬ್ಬದ ಅಂಗವಾಗಿ ತೆಂಗಿನ ಸಸಿ ವಿತರಿಸಲಾಯಿತು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಹೊಸಮನೆ ಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಮೆಸ್ಕಾಂ ಲೈನ್‌ಮೆನ್‌ಗಳಿಗೆ ಹಾಗೂ ನಗರಸಭೆ ಪೌರಕಾರ್ಮಿಕರಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಹಾಗೂ ತಾಲೂಕಿನ ವೀರಪುರ ಗ್ರಾಮದಲ್ಲಿ ಸುಮಾರು 1 ಸಾವಿರ ತೆಂಗಿನ ಸಸಿಗಳನ್ನು ರೈತರಿಗೆ ವಿತರಿಸಲಾಯಿತು. ಸಂಸದ ಬಿ.ವೈ ರಾಘವೇಂದ್ರ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಶಂಸೆ ವ್ಯಕ್ತಪಡಿಸಿದರು.
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಸ್ ಜ್ಯೋತಿ ಪ್ರಕಾಶ್, ಸದಸ್ಯರಾದ ವಿ. ಕದಿರೇಶ್, ರಾಮಲಿಂಗಯ್ಯ, ಹಟ್ಟಿ ಚಿನ್ನದ ಗಣಿ ಕಂಪನಿ ಆಡಳಿತ ಮಂಡಳಿ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ತಾಲೂಕು ಅಧ್ಯಕ್ಷ ಎಂ. ಪ್ರಭಾಕರ್, ಅರಳಿಹಳ್ಳಿ ಪ್ರಕಾಶ್, ಗಣಪತಿ ಭಟ್, ಗ್ರಾಮ ಪಂಚಾಯಿತಿ ಸದಸ್ಯರಾದ ಸರಸ್ವತಿ, ಲೋಲಾಕ್ಷಿ, ರಂಗಸ್ವಾಮಿ, ನಗರಸಭಾ ಸದಸ್ಯರಾದ ಅನಿತಾ ಮಲ್ಲೇಶ್, ಶಶಿಕಲಾ ನಾರಾಯಣಪ್ಪ, ಮಣಿ ಎಎನ್‌ಎಸ್, ಯುವ ಕಾಂಗ್ರೆಸ್ ಅಧ್ಯಕ್ಷ ಜಿ. ವಿನೋದ್, ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪಾಟೀಲ್ ಹಾಗು ಹಿಂದೂ ಮಹಾಸಭಾ ಹಿಂದೂ ರಾಷ್ಟ್ರಸೇನಾ ವಿನಾಯಕ ಸೇವಾ ಸಮಿತಿ ಪ್ರಮುಖರು, ಸ್ಥಳಿಯ ಮುಖಂಡರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post