ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ರತಿ, ಮನ್ಮಥನ ಪ್ರತಿಷ್ಠಾಪನೆಯೊಂದಿಗೆ ನಗರದ ವಿವಿಧೆಡೆ 3 ದಿನಗಳಿಂದ ಹೋಳಿ ಹಬ್ಬ ಆಚರಣೆಗೆ ಚಾಲನೆ ನೀಡಲಾಗಿದೆ.
ಕೋವಿಡ್-19ರ ನಡುವೆಯೂ ಪ್ರತಿವರ್ಷದಂತೆ ಈ ಬಾರಿ ಸಹ ಹಳೇನಗರದ ಕುಂಬಾರರ ಬೀದಿಯಲ್ಲಿ ಹೋಳಿ ಮಹೋತ್ಸವ ಸೇವಾ ಸಮಿತಿ ವತಿಯಿಂದ ಹಾಗೂ ಪೇಟೆ ಬೀದಿಯಲ್ಲಿ ರತಿ, ಮನ್ಮಥರನ್ನು, ಬ್ರಾಹ್ಮಣರ ಬೀದಿಯಲ್ಲಿ ಮನ್ಮಥ ಸೇವಾ ಸಮಿತಿ ವತಿಯಿಂದ ಮನ್ಮಥನನ್ನು ಪ್ರತಿಷ್ಠಾಪಿಸುವ ಮೂಲಕ ಹೋಳಿ ಹಬ್ಬ ಆಚರಿಸಲಾಗುತ್ತಿದೆ.
ಸಾಂಸ್ಕೃತಿಕ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗುತ್ತಿದ್ದು, ಮಾರ್ಚ್ ೨೯ರ ನಾಳೆ ಬೆಳಿಗ್ಗೆ ರತಿ-ಮನ್ಮಥರ ರಾಜಬೀದಿ ಉತ್ಸವದ ನಂತರ ಕಾಮದಹನ ನಡೆಯಲಿದೆ ಎನ್ನಲಾಗಿದೆ.
ಈಗಾಗಲೇ ಸರ್ಕಾರ ಕೋವಿಡ್-19ರ ಹಿನ್ನಲೆಯಲ್ಲಿ ಹೋಳಿ ಹಬ್ಬ ಆಚರಣೆಗೆ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದ್ದು, ಹೆಚ್ಚಿನ ಜನಸಂದಣಿ ಉಂಟಾಗದಂತೆ ಎಚ್ಚರವಹಿಸುವಂತೆ ಸೂಚಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















