ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಲೋಕಸಭಾ ಚುಣಾವಣೆಯ ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ ನಗರದಲ್ಲಿ ನಿನ್ನೆ ಹಿಂದೂ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿತ್ತು.
ಕೆ.ಎಸ್. ಈಶ್ವರಪ್ಪ #K S Eshwarappa ಅವರ ಪರವಾಗಿ ಆಯೋಜಿಸಲಾಗಿದ್ದ ಸಮಾವೇಶ ಅವರ ಶಕ್ತಿ ಪ್ರದರ್ಶನದಂತಿತ್ತು.
ಅಂಡರ್ ಬ್ರಿಡ್ಜ್ ಬಳಿಯಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಹಾರ ಹಾಕುವ ಮೂಲಕ ಕೆ.ಎಸ್. ಈಶ್ವರಪ್ಪ ಬೈಕ್ ರ‍್ಯಾಲಿಗೆ ಚಾಲನೆ ನೀಡಿದರು.
Also read: ಶಿವಮೊಗ್ಗ | ಅಬ್ಬಲಗೆರೆ ಗ್ರಾಪಂ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ
ಭದ್ರಾವತಿ ನಗರದ ಮುಖ್ಯ ರಸ್ತೆಗಳಲ್ಲಿ ಸಾಗಿದ ರ‍್ಯಾಲಿ ತರೀಕೆರೆ ರಸ್ತೆಯಲ್ಲಿರುವ ಪಾಂಡುರಂಗ ಕಲ್ಯಾಣ ಮಂಟಪದ ಬಳಿ ತಲುಪಿತು. ಕಲ್ಯಾಣ ಮಂಟಪ ಬಳಿ ಮಂಗಳವಾದ್ಯಗಳೊಂದಿಗೆ ಮಹಿಳೆಯರು ಈಶ್ವರಪ್ಪ ರವರಿಗೆ ಪೂರ್ಣಕುಂಭ ಸ್ವಾಗತ ಮಾಡಿದರು.
ಕಾರ್ಯಕ್ರಮದಲ್ಲಿ ಭದ್ರಾವತಿ ಮಂಡಲದ ಬಿಜೆಪಿ ಮಾಜಿ ಅಧ್ಯಕ್ಷ ಪ್ರಭಾಕರ್, ಹಿಂದುತ್ವವಾದಿ ನಾರಾಯಣಪ್ಪ, ಪ್ರದೀಪ್ ಕುಟ್ಟಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post