ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಅಕ್ರಮ ಮರಳು ಗಣಿಗಾರಿಕೆ ತಡೆಯಲು ಹೋದ ಗಣಿ ಇಲಾಖೆ ಮಹಿಳಾ ಅಧಿಕಾರಿಗೆ #Obscence Word used for Women Officer ಶಾಸಕರ ಪುತ್ರ ಬಸವೇಶ್ ಅಶ್ಲೀಲ ಪದ ಬಳಸಿದ ವೀಡಿಯೋ ಎಡಿಟೆಡ್ ಎಂದಾದರೆ ಅದನ್ನು ಎಫ್’ಎಸ್’ಎಲ್’ಗೆ ಕಳುಹಿಸಿ ಎಂದು ಬಿಜೆಪಿ ಸವಾಲು ಹಾಕಿದೆ.
ಪ್ರಕರಣವನ್ನು ವಿರೋಧಿಸಿ ಶಾಸಕ ಬಿ.ಕೆ. ಸಂಗಮೇಶ್ #MLA B K Sangamesh ಹಾಗೂ ಅವರ ಪುತ್ರ ಬಸವೇಶ್ ವಿರುದ್ಧ ನಗರದಲ್ಲಿ ಬಿಜೆಪಿ ನಡೆಸಿದ ಬೃಹತ್ ಪ್ರತಿಭಟನಾ ಧರಣಿಯಲ್ಲಿ ಬಿಜೆಪಿ ಮುಖಂಡ ಧರ್ಮಪ್ರಸಾದ್ ವಾಗ್ದಾಳಿ ನಡೆಸಿದರು.

ಕ್ಷೇತ್ರದಲ್ಲಿ ಅಮಾಯಕರ ಮೇಲೆ ದೌರ್ಜನ್ಯ ನಡೆಯುತ್ತಿದ್ದ ಅದಕ್ಕೆ ಶಾಸಕರೇ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ತಾಕತ್ ಇದ್ದರೆ ನಮ್ಮ ವಿರುದ್ದ ಹೋರಾಡಿ ಎಂದು ಸವಾಲು ಹಾಕಿದರು.
Also read: ಸತತ ಪ್ರಯತ್ನದ ಫಲದಿಂದ ನಿರ್ದಿಷ್ಟವಾದ ಗುರಿ ಮುಟ್ಟಲು ಸಾಧ್ಯ: ಪ್ರಾಚಾರ್ಯ ಡಾ. ಶಿವಕುಮಾರ್ ಅಭಿಮತ
ಅಧಿಕಾರಿಗಳಿಂದ ಕರ್ತವ್ಯ ಲೋಪವಾಗಿದೆ ಎಂದು ಆರೋಪಿಸಿದ ಅವರು, ಕ್ಷೇತ್ರದಲ್ಲಿನ ಅಧಿಕಾರಿಗಳ ಮೇಲೂ ಸಹ ದೌರ್ಜನ್ಯ ನಡೆಯುತ್ತಿದ್ದು, ಅವರುಗಳಿಗಾಗಿ ಇಂದು ನಾವು ಹೋರಾಡುತ್ತಿದ್ದೇವೆ. ರಮೇಶ್ ಎನ್ನುವವರು ಅಕ್ರಮ ಮರಳು ಗಣಿಗಾರಿಕೆ ಮಾಡುತ್ತಿರುವುದು ಸಾಬೀತಾರೂ ಅವರ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ಅಕ್ರಮ ಮರಳು ದಂಧೆ ನಡೆಯುತ್ತಿರುವುದು ತಿಳಿದಿದ್ದರೂ, ಇದನ್ನು ತಡೆಯದಂತೆ ಸಿಎಂ, ಡಿಸಿಎಂಗಳಿಂದ ಫೋನ್ ಮಾಡಿಸುತ್ತಾರೆ. ಅಧಿಕಾರಿಗಳ ಮೇಲೂ ಸಹ ಶಾಸಕರ ಕುಟುಂಬದ ದೌರ್ಜನ್ಯ ನಡೆಯುತ್ತಿದ್ದು, ಇದು ಇಡೀ ಭದ್ರಾವತಿಗೇ ಗೊತ್ತಿದೆ ಎಂದರು.

ಪ್ರತಿಭಟನೆಯಲ್ಲಿ ಬಿಜೆಪಿ ಪ್ರಮುಖರಾದ ಮಂಗೋಟೆ ರುದ್ರೇಶ್, ಮಂಜುಳಾ, ಸತೀಶ್ (ಟೈಲರ್), ಜಿ. ಆನಂದಕುಮಾರ್ ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post