ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಜನವಸತಿ ಪ್ರದೇಶಕ್ಕೆ ನುಗ್ಗಿದ್ದ ಚಿರತೆ ಮನೆಯ ಅಂಗಳದಲ್ಲಿ ಮಲಗಿದ್ದ ಸಾಕು ನಾಯಿಯನ್ನು ಕೊಂದು ಹಾಕಿರುವ ಘಟನೆ ನೆನ್ನೆ ರಾತ್ರಿ ತಾಲೂಕಿನ ಗೊಂದಿ ಗ್ರಾಮದಲ್ಲಿ ನಡೆದಿದೆ.
ಗೊಂದಿ ಗ್ರಾಮದಲ್ಲಿ ವಾಸವಾಗಿರುವ ಪತ್ರಕರ್ತರಾದ ಗಂಗಾನಾಯ್ಕ ಗೊಂದಿರವರ ತೋಟದ ಮನೆಯ ಅಂಗಳದಲ್ಲಿ ಮಲಗಿದ್ದ ಜರ್ಮನ್ ಶಫರ್ಡ್ ತಳಿಯ ಸಾಕುನಾಯಿಯ ಮೇಲೆ ಜನವರಿ 12ರ ರಾತ್ರಿ ಚಿರತೆ ದಾಳಿ ನಡೆಸಿ ಕೊಂದುಹಾಕಿದೆ. ಅಲ್ಲದೆ ನಾಯಿಯನ್ನು ದೂರಕ್ಕೆ ತೆಗೆದುಕೊಂಡು ಹೋಗಿ ತೋಟದಲ್ಲಿ ತಿಂದು ಹಾಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















