ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲ್ಲೂಕು ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಯುವತಿ ಸಾವಿನ ಪ್ರಕರಣ ಸಂಬಂಧಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಎಸ್‌ಪಿ ಮಿಥುನ್ ಕುಮಾರ್ #SP Mithun Kumar ಹೇಳಿದ್ದಾರೆ.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, 19 ವರ್ಷದ ಸ್ವಾತಿಯನ್ನು ಕೊಲೆ ಮಾಡಿರುವ ಆರೋಪ ಸಂಬಂಧ ಪೋಷಕರು ನೀಡಿದ ದೂರಿನನ್ವಯ ಸೂರ್ಯ (20) ಎಂಬಾತನ ವಿರುದ್ದ ಕೊಲೆ ಆರೋಪದಡಿ ಪ್ರಕರಣ ದಾಖಲಾಗಿದ್ದು ಆತನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಯರೆಹಳ್ಳಿಯ ಕೆಂಚಮ್ಮನಹಳ್ಳಿಯ ಸಮೀಪ ಭದ್ರಾ ಕ್ಯಾನಲ್ನ ಬಳಿಯಲ್ಲಿ ಆರೋಪಿ ಸೂರ್ಯ, ಸ್ವಾತಿಯನ್ನು ಕರೆದುಕೊಂಡು ಹೋಗಿ ಕೀಟನಾಶಕ ಪುಡಿಯನ್ನು ಸೇವಿಸಿ, ಆನಂತರ ಆಕೆಯನ್ನು ಬಲವಂತವಾಗಿ ಚಾನಲ್ಗೆ ದೂಡಿದ್ದಾನೆ ಎಂದು ಪೋಷಕರು ದೂರು ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ಸೂರ್ಯನನ್ನು ಬಂಧಿಸಲಾಗಿದ್ದು, ಸದ್ಯ ಪ್ರಕರಣದ ಬಗ್ಗೆ ಗಂಭೀರವಾಗಿ ತನಿಖೆ ಮಾಡಲಾಗುತ್ತಿದೆ. ಇನ್ನೂ ಪ್ರಕರಣದಲ್ಲಿ ಆರೋಪಿಯ ತಂದೆಯ ಪಾತ್ರವೂ ಇದೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆಯು ತನಿಖೆ ಮಾಡಲಾಗುತ್ತಿದೆ. ಹೆಚ್ಚಿನ ಮಾಹಿತಿ ತನಿಖೆಯ ನಂತರ ಸ್ಪಷ್ಟಗೊಳ್ಳಲಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post