ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಸದಾ ಕಾಲ ಶ್ರಮಿಸುತ್ತಿದ್ದಾರೆ. ಇವರ ಕೋರಿಕೆಯಂತೆ ರಾಜ್ಯ ಸರ್ಕಾರ ಸಹ ಪೂರಕವಾಗಿ ಸ್ಪಂದಿಸುವ ಮೂಲಕ ಹೆಚ್ಚಿನ ಅನುದಾನ ಸಹ ಬಿಡುಗಡೆಗೊಳಿಸುತ್ತಿದೆ. ಮುಂದಿನ ದಿನಗಳಲ್ಲಿ ಇವರಿಗೂ ಸಚಿವ ಸ್ಥಾನ ಲಭಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಅವರು ಭಾನುವಾರ ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಾ ಜಲಾಶಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜೀವನದಿ ಭದ್ರೆಗೆ ಬಾಗಿನ ಅರ್ಪಣೆ, ಗಂಗಾ ಪೂಜೆ ಹಾಗು ನೂತನವಾಗಿ ನಿರ್ಮಾಣಗೊಂಡಿರುವ ಪರಿವೀಕ್ಷಣಾ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವಹಿಸಿ ಮಾತನಾಡಿದರು.

ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಮಾತನಾಡಿ, ಭದ್ರೆ ಕೇವಲ ನೀರಲ್ಲ. ಇದೊಂದು ಅಮೃತವಾಗಿದ್ದು, ಇಂದು ಲಕ್ಷಾಂತರ ಜನರು ಅವಲಂಬಿಸಿದ್ದಾರೆ. ಇಂತಹ ಅಮೃತ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸುತ್ತಿರುವುದು ಶಾಸಕರು ಪುಣ್ಯ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಳೆಯಾಗದೆ ಬರಗಾಲ ಬರುತ್ತದೆ. ಜಲಾಶಯಗಳಲ್ಲಿ ನೀರಿಲ್ಲದೆ ಜನರು ಸಂಕಷ್ಟಕ್ಕೆ ಒಳಗಾಗುತ್ತಾರೆಂದು ಕೆಲವರು ದೂರುತ್ತಾರೆ. ಆದರೆ ಇಂದು ರಾಜ್ಯದೆಲ್ಲೆಡೆ ನಿರಂತರವಾಗಿ ಮಳೆಯಾಗುತ್ತಿದೆ ಜಲಾಶಯಗಳು ಭರ್ತಿಯಾಗಿ ಜನರು ನೆಮ್ಮದಿ ಬದುಕು ಕಾಣುವಂತಾಗಿದೆ ಎಂದರು.

ತಹಸೀಲ್ದಾರ್ ಪರುಸಪ್ಪ ಕುರುಬರ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ನಗರ ಆಶ್ರಯ ಸಮಿತಿ ಅಧ್ಯಕ್ಷ ಗೋಪಾಲ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಪ್ರಮುಖರಾದ ಎಸ್. ಕುಮಾರ್, ಸಿ.ಎಂ ಖಾದರ್, ಮಣಿಶೇಖರ್, ಎಚ್. ರವಿಕುಮಾರ್, ಬಿ.ಕೆ ಜಗನ್ನಾಥ್, ಸೈಯದ್ ರಿಯಾಜ್, ಬಿ.ಎಸ್ ಗಣೇಶ್, ಬಿ.ಎಂ. ರವಿಕುಮಾರ್, ಬಿ.ಎಂ ಮಂಜುನಾಥ್, ಬಸವೇಶ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಮಹಿಳಾ ಸಂಘಟನೆಗಳ ಪ್ರಮುಖರು, ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಎಚ್.ಎಲ್ ಷಡಾಕ್ಷರಿ ಸ್ವಾಗತಿಸಿ, ಲತಾ ಚಂದ್ರಶೇಖರ್ ಸಂಗಡಿಗರು ಪ್ರಾರ್ಥಿಸಿದರು. ಎಂ. ಶಿವಕುಮಾರ್, ಮುಸ್ವೀರ್ ಬಾಷಾ ನಿರೂಪಿಸಿದರು.










Discussion about this post