ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಗಾಂಜಾ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯದ ಆದೇಶದಂತೆ ಕೂಲಿ ಬ್ಲಾಕ್ ಶೆಡ್ ನಿವಾಸಿ ಆದಿಲ್ ಭಾಷಾ ಎನ್ನುವವನನ್ನು ಬಂಧಿಸಲಾಗಿದೆ.
ಮಾದಕ ದ್ರವ್ಯಗಳು ಮತ್ತು ಮನೋವಿಕೃತ ವಸ್ತುಗಳ ಕಾಯ್ದೆ ಅಡಿಯ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹೊರಡಿಸಿದ್ದ ಸ್ಪೆಷಲ್ ಸಿ 248 /22 ಕಲಂ 20(ಬಿ) (2) (ಬಿ) ಪ್ರಕರಣದಲ್ಲಿ ಕಂಡ ಆರೋಪಿ ಎ4 ಆದಿಲ್ ಭಾಷಾನನ್ನು ಬಂಧಿಸಲು ವಾರೆಂಟ್ ಹೊರಡಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಪಿಎಸ್’ಐ ರಮೇಶ್ ಅವರ ಮಾರ್ಗದರ್ಶನದಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ಕೂಲಿ ಬ್ಲಾಕ್ ಶೆಡ್ ನಿವಾಸಿ ಆದಿಲ್ ಭಾಷಾನನ್ನು ಬಂಧಿಸಲಾಗಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಹಸ್ತಾಂತರ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post