ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಅಕ್ರಮವಾಗಿ ಕೂಡಿ ಹಾಕಲಾಗಿದ್ದ ಸುಮಾರು 16 ಗೋವುಗಳನ್ನು ಇಲ್ಲಿನ ಹಳೇನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ರಕ್ಷಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನಗರಸಭೆ ವ್ಯಾಪ್ತಿಯ ಅನ್ವರ್ ಕಾಲೋನಿಯಲ್ಲಿ ತಬ್ರೇಜ್ ಎಂಬುವವರಿಗೆ ಸೇರಿದ ಒಂದು ಮನೆಯಲ್ಲಿ ಕೂಡಿ ಹಾಕಲಾಗಿದ್ದ ಒಟ್ಟು 10 ಗೋವುಗಳನ್ನು ಹಾಗೂ ಈತನಿಗೆ ಸೇರಿದ ಮತ್ತೊಂದು ಮನೆಯಲ್ಲಿ ಕೂಡಿ ಹಾಕಲಾಗಿದ್ದ 3 ಗೋವುಗಳನ್ನು ಹಾಗೂ ಜಾಫರ್ ಸಾಧಿಕ್ ಎಂಬುವರ ಮನೆಯಲ್ಲಿ ಕೂಡಿ ಹಾಕಲಾಗಿದ್ದ 3 ಗೋವುಗಳನ್ನು ಒಟ್ಟು 16 ಗೋವುಗಳನ್ನು ಪೊಲೀಸರು ರಕ್ಷಿಸಿದ್ದಾರೆ.
ಗೋ ಮಾಂಸದ ಉದ್ದೇಶಕ್ಕಾಗಿ ಗೋವುಗಳನ್ನು ಕೂಡಿಹಾಕಲಾಗಿತ್ತು ಎನ್ನುವ ಮಾಹಿತಿಗಳ ಆಧಾರದ ಮೇರೆಗೆ ಪೊಲೀಸರು ದಾಳಿ ನಡೆಸಿ ಗೋವುಗಳನ್ನು ರಕ್ಷಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತಬ್ರೇಜ್ ಮತ್ತು ಜಾಫರ್ ಸಾಧಿಕ್ ತಲೆ ಮರೆಸಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post