ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ತರೀಕೆರೆ ರಸ್ತೆಯಲ್ಲಿರುವ ಲೋಕೋಪಯೋಗಿ ಇಲಾಖೆಯ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಹುತೇಕ ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿರುವುದು ತಿಳಿದು ಬಂದಿದೆ.
ಕಛೇರಿಯಲ್ಲಿ ಕಾರ್ಯಪಾಲಕ ಇಂಜಿನಿಯರ್(ಎಇಇ) ಸೇರಿದಂತೆ ಸುಮಾರು 11 ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಪೈಕಿ ಕಾರ್ಯಪಾಲಕ ಇಂಜಿನಿಯರ್ ಸೇರಿದಂತೆ 7 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಕಛೇರಿ ಸಿಬ್ಬಂದಿಗಳಲ್ಲಿ ಸೋಂಕು ದೃಢಪಟ್ಟಿರುವ ಹಿನ್ನಲೆಯಲ್ಲಿ ನಗರಸಭೆ ವತಿಯಿಂದ ಮಂಗಳವಾರ ಮಧ್ಯಾಹ್ನ ಸೋಂಕು ನಿವಾರಕ ಸಿಂಪಡಿಸಲಾಗಿದೆ. ಒಂದು ದಿನದ ಮಟ್ಟಿಗೆ ಕಛೇರಿಯನ್ನು ಸಂಪೂರ್ಣವಾಗಿ ಸೀಲ್ಡೌನ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post