ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ತಾಲ್ಲೂಕಿನಲ್ಲಿ ಸಮಾಜ ಸೇವಕರು ಹಾಗೂ ನಾಯಕರು ವಿವಿಧ ಪಕ್ಷಗಳನ್ನು ತೊರೆದು ಅಧಿಕೃತವಾಗಿ ಎಸ್‌ಡಿಪಿಐ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಭದ್ರಾವತಿಯ ಎಸ್‌ಡಿಪಿಐ ತಾಲ್ಲೂಕು ಕಛೇರಿಯಲ್ಲಿ ತಾಲ್ಲೂಕು ಅಧ್ಯಕ್ಷರಾದ ಮುಹಮ್ಮದ್ ತಾಹಿರ್ ರವರ ಅಧ್ಯಕ್ಷತೆಯಲ್ಲಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ನಡೆಸಲಾಯಿತು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕಾರ್ಯ ಚಟುವಟಿಕೆಗಳನ್ನು ಮೆಚ್ಚಿ ಸಾಮಾಜಿಕ ನ್ಯಾಯಕ್ಕಾಗಿ ನಿರಂತರ ಹೋರಾಟಗಳನ್ನು ನೋಡಿ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಭದ್ರಾವತಿ ತಾಲ್ಲೂಕಿನ ವಿವಿಧ ರಾಜಕೀಯ ಪಕ್ಷಗಳ ನಾಯಕರು ಹಾಗೂ ಸಮಾಜ ಸೇವಕರು ಬೇರೆ ಪಕ್ಷಗಳನ್ನು ತೊರೆದು ಎಸ್‌ಡಿಪಿಐ ಸೇರ್ಪಡೆಗೊಂಡಿದ್ದಾರೆ.
ಮುಖ್ಯವಾಗಿ ವಿನ್ಸೆಂಟ್ ವಿನೋದ್ ಕುಮಾರ್, ದೆವೇಂದ್ರ ಪಾಟಿಲ್, ಅಮೀರ್ ಜಾನ್ ಸಾಬ್, ಫೈರೋಜ್ ಖಾನ್ ಸಾಬ್ ಹಾಗೂ ಮುಂತಾದವರು ಇಂದು ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಸಲೀಂ ಖಾನ್ ಸಮ್ಮುಖದಲ್ಲಿ, ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು ಕಾರ್ಯಕರ್ತರಾಗಿ ಸೇರ್ಪಡೆಗೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post