ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕ್ರೈಸ್ತರ ಹಿತರಕ್ಷಣೆ ಉದ್ದೇಶದಿಂದ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ Parliament Election ಕಾಂಗ್ರೆಸ್ ಪಕ್ಷ ಬೆಂಬಲಿಸುವುದಾಗಿ ತೆಲುಗು ಕ್ರಿಶ್ಚಿಯನ್ ಅಸೋಸಿಯೇಷನ್ ಹಾಗೂ ತೆಲುಗು ಕ್ರಿಶ್ಚಿಯನ್ ಒಕ್ಕೂಟದ ಮುಖಂಡರು ತಿಳಿಸಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಹಿಂದಿನ ಚುನಾವಣೆಯಲ್ಲಿ ಲೋಕಸಭಾ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರನ್ನು ಬೆಂಬಲಿಸಲಾಗುತ್ತಿತ್ತು. ಆದರೆ ಪ್ರಸ್ತುತ ಬರಲಾದ ರಾಜಕೀಯ ಪರಿಸ್ಥಿತಿಯಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ Geetha Shivrajkumar ಅವರನ್ನು ಬೆಂಬಲಿಸುವುದಾಗಿ ಮುಖಂಡರು ತಿಳಿಸಿದರು.
ಭದ್ರಾವತಿ ತಾಲೂಕಿನಲ್ಲಿ ಸುಮಾರು 25000 ಕ್ರೈಸ್ತ ಮತದಾರರಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರು ಜಾತ್ಯಾತೀತ ನಾಯಕರಾಗಿದ್ದರು. ಅವರು ಎಲ್ಲಾ ಜಾತಿ, ಧರ್ಮದ ಪರವಾಗಿ ಶ್ರಮಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಅವರನ್ನು ಬೆಂಬಲಿಸಲಾಗುತ್ತಿದೆ. ಅಲ್ಲದೆ ಕ್ಷೇತ್ರದಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಕ್ರೈಸ್ತರ ಪರವಾಗಿದ್ದಾರೆ. ಈ ಎಲ್ಲಾ ಕಾರಣಗಳಿಂದ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭ್ಯರ್ಥಿಯನ್ನು ಬೆಂಬಲಿಸಲಾಗುತ್ತಿದೆ ಎಂದರು.
Also read: ಬೆಂಗಳೂರು | ಜಯನಗರ ರಾಯರ ಮಠದಲ್ಲಿ ಪ್ರತಿನಿತ್ಯ ಗುರುಗಳ ಜೀವನ ಚರಿತ್ರೆಯ ಪ್ರವಚನ
ಕ್ರೈಸ್ತ ಸಂಘಟಕರಿಗೆ ಕಿರುಕುಳ ಹೆಚ್ಚುತ್ತಿದೆ. ಆದ್ದರಿಂದ ಕ್ರೈಸ್ತರಿಗೆ ರಕ್ಷಣೆ ಮುಖ್ಯ. ಕ್ರೈಸ್ತರು ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ರಾಜಕೀಯ ಸ್ಥಾನಮಾನದಲ್ಲೂ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ. ಇಂತಹ ಸನ್ನಿವೇಶದಲ್ಲಿ ನಮ್ಮ ರಕ್ಷಣೆಗಾಗಿ ಕಾಂಗ್ರೆಸ್ ನಮ್ಮ ಆದ್ಯತೆ ಎಂದರು.
ಸುದ್ದಿಗೋಷ್ಠಿಯಲ್ಲಿ ತೆಲುಗು ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಬಾಸ್ಕರ್ ಬಾಬು, ತೆಲುಗು ಕ್ರಿಶ್ಚಿಯನ್ ಒಕ್ಕೂಟದ ಅಧ್ಯಕ್ಷ ಯೇಸುದಾಸ್, ಫಾಸ್ಟರ್ ಗಳಾದ ಜಾನ್ಸನ್, ಉಮೇಶ್, ಜಯರಾಂ, ಪ್ರಭಾಕರ್, ಅಂತೋಣಿ ಪ್ರಕಾಶ್, ಅಬಕೂಪ್, ಕ್ರೈಸ್ತ ಮುಖಂಡರಾದ ಗ್ಯಾಬ್ರಿಯಲ್, ರಾಜು, ಅಂತೋಣಿ, ಎಂ.ಸಾಮ್ಯುಯೆಲ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post