ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಪ್ ಉಲ್ಲಂಘಿಸಿದ ಮೂವರು ನಗರಸಭೆಯ ಸದಸ್ಯರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ನಗರಸಭೆಯ ಸದಸ್ಯರಾದ ವಿ. ಕದಿರೇಶ್, ಅನಿತಾ ಮಲ್ಲೇಶ್ ಹಾಗೂ ಶಶಿಕಲಾ ನಾರಾಯಣ ಅವರುಗಳನ್ನು ತಕ್ಷಣವೇ ಜಾರಿಗೆ ಬರುವಂತೆ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ.
Also read: ಶರಾವತಿ ನೀರು ಬೆಂಗಳೂರಿಗೆ ಒಯ್ಯುವ ಯೋಜನೆ ಕೈಬಿಡಬೇಕು
ಈ ಕುರಿತಂತೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಉಚ್ಛಾಟನೆಗೆ ಕಾರಣವೇನು?
ಆಗಸ್ಟ್ 28 ಭದ್ರಾವತಿ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಸದಸ್ಯರಿಗೆ ವಿಪ್ ಜಾರಿ ಮಾಡಿತ್ತು. ಆದರೆ, ಪಕ್ಷ ಜಾರಿಗೊಳಿಸಲಾಗಿದ್ದ ವಿಪ್ ಉಲ್ಲಂಘಿಸಿ ಚುನವಣೆಗೆ ಹಾಜರಾಗದೇ ಇರುವ ಕಾರಣದಿಂದಾಗಿ ಮೂವರು ಸದಸ್ಯರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post