ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲ್ಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಚುನಾವಣೆಯಲ್ಲಿ ಉಮಾದೇವಿ ತಿಪ್ಪೇಶ್ ಅವರು ಅವಿರೋಧವಾಗಿ ಆಯ್ಕೆಯಾದರು.
ಹಿಂದಿನ ಅಧ್ಯಕ್ಷ ಮಲಕ್ ಬಿ. ವೀರಪ್ಪನ್ ತಮ್ಮ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದರಿಂದ ತೆರವಾದ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ರಮೇಶ್ ಚುನಾವಣೆ ನಡೆಸಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿದರು. ನಿಗದಿತ ಸಮಯದಲ್ಲಿ ಉಮಾದೇವಿ ತಿಪ್ಪೇಶ್ ನಾಮಪತ್ರ ಸಲ್ಲಿಸಿದ ಕಾರಣ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಘೋಷಿಸಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ರಮೇಶ್, ಉಪಾಧ್ಯಕ್ಷ ಕುಬೇರನಾಯ್ಕ್, ಸದಸ್ಯರಾದ ಜಯಣ್ಣ, ರುದ್ರೇಶ, ಸ್ವಾಮೀನಾಥ, ವಿಶ್ವನಾಥ, ನಾಗರಾಜ್, ಮಲಕ್, ಭಾಗ್ಯ, ಸಿದ್ದಮ್ಮ, ನೀಲಾಬಾಯಿ, ಪಾರ್ವತಿ ಬಾಯಿ, ಗೌರಮ್ಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಅಶೋಕ್, ಕಾರ್ಯಧರ್ಶಿ ಸತೀಶ್ ಗೌಡ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post