ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳಗಿನ ಜಾವ ಚರಂಡಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವಾಗ ಸುಮಾರು 6 ಅಡಿ ಉದ್ದದ ಹೆಬ್ಬಾವು #Snake ಪತ್ತೆಯಾಗಿದ್ದು, ಇದನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ನಡೆದಿದೆ.
ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಸ್ಥಳೀಯ ನಿವಾಸಿ ಟಿ.ಡಿ ಶಶಿಕುಮಾರ್ರವರು ಪಂಚಾಯಿತಿ ವಾರ್ಡ್ ವ್ಯಾಪ್ತಿಯ ಚರಂಡಿಗಳಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವಾಗ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ. ತಕ್ಷಣ ಹಾವು ರಕ್ಷಕರಿಗೆ ಮಾಹಿತಿ ನೀಡಿದ್ದು, ಹಾವನ್ನು ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಶಶಿಕುಮಾರ್ರವರು ಹೆಬ್ಬಾವು ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ವಾರ್ಡ್ಗಳಲ್ಲಿ ಚರಂಡಿಗಳು ಸದಾ ಸ್ವಚ್ಛತೆಯಿಂದ ಕೂಡಿರಬೇಕು. ಇಲ್ಲವಾದಲ್ಲಿ ರೋಗರುಜಿನಗಳ ಜೊತೆಗೆ ಅಪಾಯಕಾರಿ ಜೀವಿಗಳ ಆಶ್ರಯ ತಾಣಗಳಾಗಿ ಮಾರ್ಪಡಲಿವೆ ಎಂದು ನಿವಾಸಿಗಳಿಗೆ ಎಚ್ಚರಿಸಿದ್ದಾರೆ.
Discussion about this post