ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನ ವಿವಿಧೆಡೆ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಗ್ರಾಮಾಂತರ ಪೊಲೀಸರ ತಂಡವು ಇಬ್ಬರನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ ಮತ್ತು ನಗದನ್ನು ವಶಪಡಿಸಿಕೊಂಡಿದ್ದಾರೆ.
ವಸಂತರಾಜು (37), ಶ್ವೇತಾ (32) ಬಂಧಿತರಾಗಿದ್ದು, ಆರೋಪಿಗಳಿಂದ 220 ಗ್ರಾಂ ಚಿನ್ನಾಭರಣ, 132 ಗ್ರಾಂ ಬೆಳ್ಳಿ, ಹಾಗೂ 5000ರೂ. ನಗದನ್ನು ವಶಪಡಿಸಿಕೊಂಡು, ಕಾನೂನು ರೀತ್ಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಆರೋಪಿಗಳು ತಾಲೂಕಿನ ಕುಮರಿ ನಾರಾಯಣಪುರ ಗ್ರಾಮದ ಚೌಡಮ್ಮ ದೇವಸ್ಥಾನ ಸೇರಿದಂತೆ ಪೇಪರ್ ಟೌನ್ ಮತ್ತು ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.
Also read: ಗುಡ್ ನ್ಯೂಸ್: 10 ಲಕ್ಷ ಉದ್ಯೋಗಿಗಳ ನೇಮಕಾತಿಗೆ ಪ್ರಧಾನಿ ಮೋದಿ ಘೋಷಣೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post