ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿದ್ಯಾರ್ಥಿಗಳು ಆಯಾ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ನಿಗದಿಪಡಿಸಿರುವ ಸಮವಸ್ತ್ರ ನೀತಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದ್ದರೂ, ಮುಸ್ಲಿಂ ವಿದ್ಯಾರ್ಥಿಗಳು ಇಂದು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿ ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದರು.
ನಗರದ ನ್ಯೂಟೌನ್ ಸರ್ ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿಗಳಿಗೆ ಕಾಲೇಜಿನ ಒಳಗೆ ಪ್ರವೇಶ ನಿರಾಕರಿಸಿದ, ಸರ್ಕಾರದ ಆದೇಶವನ್ನು ಪ್ರಾಂಶುಪಾಲರು ಓದಿ ತಿಳಿಸಿದರೂ ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗಲು ಅನುಮತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ನಂತರ ಹಿಜಾಬ್ ಧರಿಸಿಕೊಂಡು ತರಗತಿಗಳಿಗೆ ಹೋಗಲು ಅವಕಾಶ ನೀಡುವಂತೆ ಒತ್ತಾಯಿಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಕೇಸರಿ ವಸ್ತ್ರದೊಂದಿಗೆ ಆಗಮಿಸಿದ್ದ ವಿದ್ಯಾರ್ಥಿಗಳು ಸರ್ಕಾರದ ಆದೇಶ ಪಾಲನೆ ಮಾಡುವ ಮೂಲಕ ತರಗತಿಗಳಿಗೆ ಹಾಜರಾದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾಲೇಜು ಸುತ್ತಮುತ್ತು ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post