ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ತಾಲೂಕಿನ ತಾವರಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಣಿ ಬೀಡು ಮತ್ತು ಮಲ್ಲಿಗೇನಹಳ್ಳಿ ಗ್ರಾಮಗಳನ್ನು ಜೂ.14ರವರೆಗೆ ಸೀಲ್‌ಡೌನ್ ಮಾಡಲಾಗಿದೆ.
ಗೋಣಿ ಬೀಡು ಮತ್ತು ಮಲ್ಲಿಗೇನಹಳ್ಳಿ ಗ್ರಾಮಗಳಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಕೋವಿಡ್ ಕಾರ್ಯ ಪಡೆ ಸಭೆಯಲ್ಲಿ ಸೀಲ್‌ಡೌನ್ ಮಾಡಲು ನಿರ್ಧರಿಸಲಾಗಿದೆ.
ದಿನಸಿ ಹಾಗೂ ಮಾಸದಂಗಡಿಗಳಿಗೆ ಮಾತ್ರ ಬೆಳಿಗ್ಗೆ 6 ರಿಂದ 8 ಗಂಟೆವರೆಗೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಹೋಟೆಲ್ ಸೇರಿದಂತೆ ಯಾವುದೇ ಅಂಗಡಿಮುಂಗಟ್ಟುಗಳನ್ನು ತೆರೆಯಲು ಅವಕಾಶವಿರುವುದಿಲ್ಲ. ಮಾಸ್ಕ್ ಧರಿಸದೆ ಸಂಚರಿಸುವವರಿಗೆ ಗ್ರಾಮ ಪಂಚಾಯಿತಿ ಆಡಳಿತ 100 ರೂ. ದಂಡ ವಿಧಿಸಲಿದೆ ಎಂದು ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post