ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ನಗರದ ನ್ಯೂಟೌನ್ ಸರ್ಕಾರಿ ವಿಐಎಸ್ಎಸ್ಜೆ ಪಾಲಿಟೆಕ್ನಿಕ್ನಲ್ಲಿ ಪ್ರಸಕ್ತ ಸಾಲಿನ ಮೊದಲನೇ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಅವಧಿಯನ್ನು ವಿಸ್ತರಿಸಲಾಗಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಐಟಿಐ ಹಾಗೂ ಪಿಯುಸಿ(ವಿಜ್ಞಾನ) ಪಾಸ್ ಆದ ವಿದ್ಯಾರ್ಥಿಗಳಿಗೆ ನೇರವಾಗಿ 3ನೇ ಸೆಮಿಸ್ಟರ್ ಪ್ರವೇಶಕ್ಕೆ ಅವಕಾಶವಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 25 ಕೊನೆಯ ದಿನವಾಗಿದೆ.
3 ವರ್ಷ ಅವಧಿಯ ಸಿವಿಲ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಮೆಕಾನಿಕಲ್ ಇಂಜಿನಿಯರಿಂಗ್ ಮತ್ತು ಮೆಟಲರ್ಜಿಕಲ್ ಇಂಜಿನಿಯರಿಂಗ್ ವೃತ್ತಿ ವಿಷಯಗಳಿಗೆ ತಲಾ 60+3 ಸ್ಥಾನಗಳು ಮೀಸಲಿದ್ದು, ಎಸ್ಎಸ್ಎಲ್ಸಿ/ಸಿಬಿಎಸ್ಇ/ಐಸಿಎಸ್ಇ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 35 ಅಂಕಗಳೊಂದಿಗೆ ತೇರ್ಗಡೆ ಹೊಂದಿರುವವರು ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶ ಪಡೆಯಲು ಅರ್ಹರಾಗಿದ್ದಾರೆ.
ಹೆಚ್ಚಿನ ಮಾಹಿತಿಗೆ ಮೊ: 9986072697 ಅಥವಾ 8277498471 ಸಂಖ್ಯೆಗೆ ಕರೆ ಮಾಡಬಹುದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post