ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ನಗರದ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಕವಲಗುಂದಿಯ ಸ್ಮಶಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸಿ ಮಾದಕವಸ್ತು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ದೀಕ್ಷಿತ್ (21) ಬಂಧಿತ ಆರೋಪಿಯಾಗಿದ್ದು, ಖಚಿತ ಮಾಹಿತಿ ಮೇರೆಗೆ ನ್ಯೂ ಟೌನ್ ಪೊಲೀಸ್ ಠಾಣೆ ಪಿಎಸ್‌ಐ ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನಿಂದ ಒಟ್ಟು 480 ಗ್ರಾಂ ತೂಕದ ಮಾದಕವಸ್ತು ಗಾಂಜಾ ಹಾಗೂ ಗಾಂಜಾ ಮಾರಾಟ ಮಾಡಿ ಗಳಿಸಿದ 300ರೂ. ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post