ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ, ಪತ್ರಕರ್ತ ಮಹಾಲಿಂಗಪ್ಪ (47) ಸೋಮವಾರ ರಾತ್ರಿ ನಿಧನ ಹೊಂದಿದರು.
ತಾಯಿ, ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕಾಗದನಗರ 8ನೇ ವಾರ್ಡ್ ನಿವಾಸಿಯಾಗಿರುವ ಇವರು ಸುಮಾರು 2 ದಶಕಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಈ ಹಿಂದೆ ನಮ್ಮನಾಡು, ಎಚ್ಚರಿಕೆ ಪತ್ರಿಕೆಯಲ್ಲಿಯೂ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ.
Also read: ಸರ್ಕಾರಿ ಶಾಲೆ ಉಳಿಸೋಣ ಧ್ಯೇಯವಾಕ್ಯದೊಂದಿಗೆ ಅರ್ಥಪೂರ್ಣ ಗಣೇಶ ಹಬ್ಬಆಚರಣೆ
ಮೃತರ ಅಂತ್ಯಕ್ರಿಯೆ ನಗರದ ಬೈಪಾಸ್ ರಸ್ತೆ ಬುಳ್ಳಾಪುರದ ಬಾಳೆಮಾರನಹಳ್ಳಿ ರಸ್ತೆಯಲ್ಲಿರುವ ಶ್ರೀ ಸತ್ಯಹರಿಶ್ಚಂದ್ರ ಹಿಂದೂ ರುದ್ರಭೂಮಿಯಲ್ಲಿ ಮಂಗಳವಾರ ಸಂಜೆ ಅಂತ್ಯ ಸಂಸ್ಕಾರ ನೆರವೇರಿತು.
ಶ್ರದ್ಧಾಂಜಲಿ ಹಾಗೂ ಸಂತಾಪ:
ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಆರ್. ಬದರಿನಾರಾಯಣ ಶ್ರೇಷ್ಠಿ ಹಾಗೂ ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ ರವರ ನೇತೃತ್ವದಲ್ಲಿ ಬೆಳಿಗ್ಗೆ ಮಹಾಲಿಂಗಪ್ಪನವರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆಯುವ ಮೂಲಕ ಶ್ರದ್ಧಾಂಜಲಿ ಸಭೆ ನಡೆಸಿ ಸಂತಾಪ ಸೂಚಿಸಲಾಯಿತು.
ಸಂಘದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಜೊತೆಗೆ ಎಲ್ಲರ ಜೊತೆ ಆತ್ಮೀಯತೆ ಬೆಳೆಸಿಕೊಂಡಿದ್ದರು. ಸಂಘದ ಪದಾಧಿಕಾರಿಯಾಗಿ ಸಲ್ಲಿಸಿರುವ ಸೇವೆ ಅವಿಸ್ಮರಣೀಯ. ಇವರ ಅಕಾಲಿಕ ನಿಧನ ಸಂಘಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ದೇವರು ಇವರ ಆತ್ಮಕ್ಕೆ ಚಿರಶಾಂತಿ ಕರುಣಿಸುವ ಮೂಲಕ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು.
ಪ್ರಧಾನ ಕಾರ್ಯದರ್ಶಿ ಬಸವರಾಜ್, ಉಪಾಧ್ಯಕ್ಷ ಕೂಡ್ಲಿಗೆರೆ ಮಂಜುನಾಥ್, ಖಜಾಂಚಿ ಅನಂತಕುಮಾರ್, ಸದಸ್ಯರಾದ ಹೆಚ್.ಕೆ ಶಿವಶಂಕರ್, ಸುಭಾಷ್‍ರಾವ್ ಸಿಂಧ್ಯಾ, ಗಂಗಾನಾಯ್ಕಗೊಂದಿ, ಕೆ.ಆರ್ ಶಂಕರ್, ಸುದರ್ಶನ್, ಟಿ.ಎಚ್ ಸಂತೋಷ್ ಕುಮಾರ್, ಕಿರಣ್ ಕುಮಾರ್, ರೀನಾ ಉಪಸ್ಥಿತರಿದ್ದರು.
ಸಂತಾಪ:
ಎಚ್ಚರಿಕೆ ದಿನ ಪತ್ರಿಕೆಯ ಭದ್ರಾವತಿ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದ ಮಹಾಲಿಂಗಪ್ಪ, ನಮ್ಮನಾಡು ಪತ್ರಿಕೆಯಲ್ಲೂ ಕೆಲ ವರ್ಷ ಸೇವೆ ಸಲ್ಲಿಸಿದ್ದ ಮಹಾಲಿಂಗಪ್ಪರು ಅವರ ನಿಧನಕ್ಕೆ ಕೆಡಬ್ಲ್ಯೂಜೆ ಜಿಲ್ಲಾ ಅಧ್ಯಕ್ಷ ಕೆ. ವಿ. ಶಿವಕುಮಾರ್, ರಾಜ್ಯ ಸಮಿತಿ ಸದಸ್ಯ ಎನ್. ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಟಿ. ಅರುಣ್ ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post