ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಲಾಕ್‌ಡೌನ್ ಸಂದರ್ಭದಲ್ಲಿ ಸರ್ಕಾರ ಕಟ್ಟಡ ಕಾರ್ಮಿಕರಿಗೆ ಘೋಷಣೆ ಮಾಡಿರುವ ಮೂರುಸಾವಿರ ರೂ. ಪರಿಹಾರ ಹಣವನ್ನು ಹತ್ತು ಸಾವಿರಕ್ಕೆ ಏರಿಸಬೇಕೆಂದು ಆಗ್ರಹಿಸಿ ಕರ್ನಾಟಕ ಸ್ಟೇಟ್ ಕನ್ಸ್‌ಟ್ರಕ್ಷನ್ ವರ್ಕರ್ ಸೆಂಟ್ರಲ್ ಯೂನಿಯನ್ ವತಿಯಿಂದ ಗುರುವಾರ ಕಪ್ಪುಪಟ್ಟಿ ಧರಿಸಿ ಕಾರ್ಮಿಕ ಇಲಾಖೆಯ ಮುಂದೆ ಪ್ರತಿಭಟನೆ ನಡೆಸಲಾಯಿತು.
ಈಸಂದರ್ಭದಲ್ಲಿ ಮಾತನಾಡಿದ ಶಾಸಕ ಬಿ.ಕೆ. ಸಂಗಮೇಶ್ವರ್, ಬಿಜೆಪಿ ಸರ್ಕಾರ ಆಡಳಿತದಲ್ಲಿ ಭ್ರಷ್ಟಾಚಾರ ನಡೆಸುತ್ತಿದೆ. ಲಾಕ್ ಡೌನ್ ವೇಳೆ ಕಟ್ಟಡ ಕಾರ್ಮಿಕರಿಗೆ ನೀಡುತ್ತಿರುವ ಮೂರು ಸಾವಿರ ಸಾಲದು, ಎಲ್ಲಾ ಬಡವರ ಖಾತೆಗೆ ಹತ್ತು ಸಾವಿರ ಹಾಕಬೇಕು. ಬಿಜೆಪಿ ಅಧಿಕಾರದಿಂದ ಇಳಿಯಬೇಕು. ಅವರಿಗೆ ಆಡಳಿತ ನಡೆಸುವ ಯೋಗ್ಯತೆಯಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರಕ್ಕೆ ಬಂದರೆ ಎಲ್ಲರ ಏಳಿಗೆಗೆ ಉತ್ತಮ ಆಡಳಿತ ನೀಡುತ್ತದೆ ಎಂದರು.
ಕಟ್ಟಡ ಕಾರ್ಮಿಕರು ಮೂರು ಸಾವಿರ ಸಾಲದು, ಹತ್ತು ಸಾವಿರ ಬೇಕು. ಲಾಕ್ ಡೌನ್ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರಿಗೆ ಕೆಲಸ ಮಾಡಲು ಅವಕಾಶ ನೀಡಬೇಕು ಎಂದು ಘೋಷಣೆ ಕೂಗಿದರು.
ಪ್ರತಿಭಟನೆಯಲ್ಲಿ ಸಂಘದ ಮುಖಂಡರಾದ ಬಾಬು, ಮನು, ಸುದೀಪ್, ಶೇಖರ್ ಮುಂತಾದವರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಸಂಘದಿಂದ ಆಹಾರ ಧಾನ್ಯಗಳ ಕಿಟ್ ವಿತರಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post