ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಗೊಂಡ ಜನವಿರೋಧಿ ನೀತಿಗಳನ್ನು ಖಂಡಿಸಿ ಫೆ.20ರಂದು ಬೆಳಿಗ್ಗೆ 10ಕ್ಕೆ ಕಾಂಗ್ರೆಸ್ ವತಿಯಿಂದ ಶಾಸಕ ಬಿ.ಕೆ.ಸಂಗಮೇಶ್ವರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ನಗರ ಬ್ಲಾಕ್ ಕಾಂಗ್ರೆಸ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಯೂತ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲಾ ಕಾಂಗ್ರೆಸ್ ಪಕ್ಷದ ಸಹಯೋಗದೊಂದಿಗೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ತಾಲ್ಲೂಕು ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.
ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಸದಸ್ಯರು, ವಿವಿಧ ಸಂಘಟನೆಗಳು, ರೈತಾಪಿ ಮುಖಂಡರು, ಸ್ತ್ರೀ ಶಕ್ತಿ, ವ್ಯಾಪಾರಸ್ಥರು, ಕಾರ್ಮಿಕ ಘಟಕದವರು, ಸಮಸ್ಥ ಪ್ರಜಾ ಪ್ರಭುಗಳು ಈ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಬೇಕಾಗಿ ವಿನಂತಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post