ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ನಗರದಲ್ಲಿ ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಸಹೋದರ ಬಿ.ಕೆ.ಮೋಹನ್ ಅವರ ವಿರುದ್ಧವೂ ಪ್ರಕರಣ ದಾಖಲಿಸಿರುವುದನ್ನು ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಕೆ.ಸಿ.ವೀರಭದ್ರಪ್ಪಗೌಡ ಖಂಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಗತ್ಯ ಆರೋಪಗಳನ್ನು ಮಾಡುವುದಕ್ಕಿಂತ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ.
ಮುಖಂಡ ಸಂಜೀವ್ ಕುಮಾರ್ ಮಾತನಾಡಿ, ಶಾಸಕರ ಮೇಲೆ ಪ್ರಕರಣ ದಾಖಲಿಸಿದ್ದು, ಕಲಾಪದಿಂದಲೂ ಒಂದು ವಾರ ಅಮಾನತುಗೊಳಿಸಲಾಗಿದೆ. ಇದನ್ನು ಕೂಡಲೇ ಹಿಂಪಡೆಯಬೇಕು. ಹಾಗೂ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ರಾಜಕೀಯ ಪಕ್ಷಗಳೊಂದಿಗೆ ಶಾಂತಿ ಸಭೆ ನಡೆಸಲಿ ಎಂದು ಹೇಳಿದರು.
ದೊಡ್ಡಗೂಪೇನಹಳ್ಳಿಯ ಶಾಂತಣ್ಣ, ವಿಐಎಸ್‌ಎಲ್ ಕಾರ್ಮಿಕ ಸಂಘದ ಮಾಜಿ ಉಪಾಧ್ಯಕ್ಷ ಬಸವಂತಪ್ಪ ಮಾತನಾಡಿದರು.
ಬಿಆರ್‌ಪಿ ಶಣ್ಮುಖಪ್ಪ, ಬಾರಂದೂರು ಶಾಂತಕುಮಾರ್, ಕಡದಕಟ್ಟೆ ರವಿಕುಮಾರ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
 
	    	



 Loading ...
 Loading ... 
							



 
                
Discussion about this post