ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಪೌರಾಯುಕ್ತ ಪಿ.ಎಂ. ಚನ್ನಪ್ಪನವರ್ ಅವರಿಗೆ ಮುಂಬಡ್ತಿ ನೀಡಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರಸಭೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
ರಾಜ್ಯದಾದ್ಯಂತ 66 ಪೌರಾಯುಕ್ತರನ್ನು ವರ್ಗಾವಣೆ ಮಾಡಲಾಗಿದ್ದು, ಇದೆ ವೇಳೆ ಚನ್ನಪ್ಪನವರ್ ಅವರಿಗೆ ಮುಂಬಡ್ತಿ ನೀಡಿ ಭದ್ರಾವತಿಯಿಂದ ಶಿರಸಿ ನಗರಸಭೆ ಆಯುಕ್ತರನ್ನಾಗಿ ವರ್ಗ ಮಾಡಲಾಗಿದೆ.

ಹೌದು… ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ 66 ಪೌರಾಯುಕ್ತರನ್ನು ವರ್ಗಾವಣೆ ಮಾಡಿದ್ದು, 55 ಪೌರಾಯುಕ್ತರನ್ನು ಕೇವಲ ಒಂದು ದಿನದ ಮಟ್ಟಿಗೆ ಮಾತ್ರ ಹೊಸ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದೆ.

ಕೇವಲ ಒಂದು ದಿನದ ಮಟ್ಟಿಗೆ ಮಾತ್ರ ವರ್ಗ ಮಾಡಿರುವುದು ಏಕೆ ಎಂಬ ಪ್ರಶ್ನೆ ಈಗ ಮೂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post