ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಶಾಮಿಯಾನ ಕೆಲಸದಿಂದ ಇದೀಗ ಸಾಹಿತ್ಯದ ಕಡೆಗೆ ಒಲವು ತೋರಿಸಿರುವ ನಗರದ ಉಜ್ಜನಿಪುರ ಸಂತೋಷ್ ಶಾಮಿಯಾನ ಮಾಲೀಕ ಸಂತೋಷ್ ಎನ್. ಶೆಟ್ಟಿ ಕನ್ನಡ ಚಲನಚಿತ್ರ ರಂಗಕ್ಕೆ ಚಿತ್ರ ಸಾಹಿತಿಯಾಗಿ ಪ್ರವೇಶಿಸಿದ್ದಾರೆ. ಈ ನಿಟ್ಟಿನಲ್ಲಿ ಅವರ ಸಾಹಿತ್ಯದ 3 ಹಾಡುಗಳು (ಆಲ್ಬಂ ಸಾಂಗ್) ಶುಕ್ರವಾರ ಬಿಡುಗಡೆಗೊಂಡಿವೆ.
ಬೆಂಗಳೂರಿನ ಮಾಗಡಿ ರೋಡ್, ಜಿಟಿ ಮಾಲ್ನಲ್ಲಿ ಹಾಡುಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು. ಪ್ರಪ್ರಥಮ ಬಾರಿಗೆ ಬಿಡುಗಡೆಗೊಂಡಿತ್ತಿರುವ ಹಾಡುಗಳಿಗೆ ಎಲ್ಲರ ಮೆಚ್ಚುಗೆ ಕಂಡು ಬಂದಿತು.

ಸಮಾರಂಭದಲ್ಲಿ ಚಿತ್ರರಂಗದ ಹೆಸರಾಂತ ಚಿತ್ರ ಸಾಹಿತಿಗಳು, ಸಂಗೀತ ನಿರ್ದೇಶಕರು, ನಿರ್ಮಾಪಕರು, ಕುಟುಂಬ ವರ್ಗದವರು, ಹಿತೈಷಿಗಳು ಪಾಲ್ಗೊಂಡು ಸಂಭ್ರಮ ಹಂಚಿಕೊಂಡರು.


ಇದೀಗ ಕನ್ನಡ ಚಲನಚಿತ್ರ ರಂಗಕ್ಕೆ ಚಿತ್ರ ಸಾಹಿತಿಯಾಗಿ ಪ್ರವೇಶಿಸಿದ್ದು, ಉತ್ತಮ ಅವಕಾಶಗಳನ್ನು ಎದುರು ನೋಡುತ್ತಿದ್ದಾರೆ. ಈಗಾಗಲೇ ಕನ್ನಡ ಚಲನಚಿತ್ರ ರಂಗದ ಪ್ರಸಿದ್ದ ಸಾಹಿತಿಗಳನ್ನು ಸಂಪರ್ಕಿಸಿ ಮಾರ್ಗದರ್ಶನ ಪಡೆದುಕೊಂಡಿದ್ದು, ಎಲ್ಲಕ್ಕಿಂತ ಮುಖ್ಯವಾಗಿ ನಾಡಿನ ಕನ್ನಡಿಗರ ಮೆಚ್ಚುಗೆ, ಅಭಿಮಾನ, ಪ್ರೋತ್ಸಾಹ ಎದುರು ನೋಡುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post