ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಐಎಸ್’ಎಲ್ ಕಾರ್ಖಾನೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲ ಪ್ರಯತ್ನಗಳು ಮುಂದುವರೆದಿದ್ದು, ಸದ್ಯ ಕಾರ್ಖಾನೆಯನ್ನು ಮುಚ್ಚುವ ಪ್ರಕ್ರಿಯೆಯ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಉಕ್ಕು ಪ್ರಾಧಿಕಾರದ ನೂತನ ಅಧ್ಯಕ್ಷರನ್ನು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಕಾರ್ಖಾನೆ ಪುನಶ್ಚೇತನಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರ ವಿಐಎಸ್’ಎಲ್ ಕಾರ್ಖಾನೆ ಮುಚ್ಚುವ ನಿರ್ಧಾರ ಕೈಗೊಂಡು ಆದೇಶ ಹೊರಡಿಸಿದ್ದು, ಇದರ ವಿರುದ್ಧ ನಿರಂತರ ಪ್ರಯತ್ನದ ಫಲವಾಗಿ ಮುಚ್ಚುವ ಆದೇಶದ ಪ್ರಕ್ರಿಯೆ ಮುಂದೂಡಲ್ಪಟ್ಟಿದೆ. ಪ್ರಸ್ತುತ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲಾಗಿದೆ. ಈ ನಡುವೆ ಗುತ್ತಿಗೆ ಕಾರ್ಮಿಕರ ಹಿತಕಾಪಾಡುವಲ್ಲಿ ಯಶಸ್ವಿಯಾಗಿದ್ದು, ಕಾರ್ಖಾನೆಯನ್ನು ಉಳಿಸಿಕೊಳ್ಳುವ ಪ್ರಯತ್ನ ಈಗಲೂ ಮುಂದುವರೆಯುತ್ತಿದೆ ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಮುಖಂಡರಾದ ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್, ಕೂಡ್ಲಿಗೆರೆ ಹಾಲೇಶ್ ಇದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















