ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಬಂಧನದ ಭೀತಿ ಎದುರಿಸುತ್ತಿದ್ದ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಬಿಗ್ ರಿಲೀಫ್ ದೊರೆತಿದೆ.
ಫೆ.27 ಮತ್ತು 28 ರಂದು ಭದ್ರಾವತಿಯ ಕನಕ ಮಂಟಪದಲ್ಲಿ ಕಬಡ್ಡಿ ಪಂದ್ಯಾವಳಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಪುತ್ರ ಗಣೇಶ್ ಹಾಗೂ ಸಹೋದರ ಬಿ.ಕೆ ಮೋಹನ್ ರವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಬಂಧನ ಭೀತಿ ಎದುರಿಸಿದ್ದ ಈ ಮೂವರಿಗೆ ಶಿವಮೊಗ್ಗ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ ಎಂದು ತಿಳಿದುಬಂದಿದೆ.
ಕಳೆದ ವಾರದ ನಿರೀಕ್ಷಣಾ ಜಾಮೀನು ಕೋರಿ ಈ ಮೂವರೂ ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ನ್ಯಾಯಾಧೀಶ ಕುಡು ಒಕ್ಕಲಿಗರ್ ಸೋಮಪ್ಪನವರು ನಿರೀಕ್ಷಣಾ ಮಂಜೂರು ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post