ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಕಬ್ಬಡ್ಡಿ ಪಂದ್ಯಾವಳಿ ವೇಳೆ ಸಂಭವಿಸಿದ ಘರ್ಷಣೆಯಿಂದಾಗಿ ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದ್ದ ನಗರದ ಕನಕ ಮಂಟಪ ಮೈದಾನದಲ್ಲೇ ಇಂದು ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿದೆ.
ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಂಜೆ ಪಕ್ಷದ ಕಾರ್ಯಕರ್ತರ ಸಭೆಯನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಈಶ್ವರಪ್ಪ, ನಗರದ ಸಮಗ್ರ ಅಭಿವೃದ್ಧಿಗಾಗಿ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಕರ್ತರು ಮನೆ ಮನೆಗೂ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್, ಎಂಎಲ್’ಸಿ ರುದ್ರೇಗೌಡ, ರಾಜ್ಯ ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಡಿ.ಎಸ್. ಅರುಣ್, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಪ್ರಮುಖರಾದ ಕೆ.ಈ. ಕಾಂತೇಶ್, ಎಸ್. ದತ್ತಾತ್ರಿ, ರಾಮಲಿಂಗಯ್ಯ, ಮಂಗೋಟೆ ರುದ್ರೇಶ್, ಗಿರೀಶ್ ಪಟೇಲ್, ಸಿ. ಮಂಜುಳಾ, ಮಂಗೋಟೆ ರುದ್ರೇಶ್, ಶ್ರೀನಾಥ್, ಶಿವರಾಜ್, ಅರಳೀಹಳ್ಳಿ ಪ್ರಕಾಶ್, ಪ್ರವೀಣ್, ದತ್ತಾತ್ರಿ, ರಾಮಪ್ಪ, ಮರಿಸ್ವಾಮಿ, ವಿಶ್ವನಾಥ್ ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post