ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಸಚಿವ ಡಾ. ಅಶ್ವಥ್ ನಾರಾಯಣ್ ವಿರುದ್ಧ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಗೂಂಡಾಗಿರಿ ವರ್ತನೆ ಮಾಡಿರುವುದನ್ನು ಖಂಡಿಸಿ ನಗರದ ಮಾಧವಚಾರ್ ವೃತ್ತದಲ್ಲಿ ಬಿಜೆಪಿ ಮಂಡಲ ವತಿಯಿಂದ ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಲಾಯಿತು.
ಡಿ.ಕೆ ಸುರೇಶ್ ಗೂಂಡಾಗಿರಿತನದಿಂದ ವರ್ತಿಸಿರುವುದು ಅಕ್ಷಮ್ಯ ಅಪರಾಧವಾಗಿದ್ದು, ತಕ್ಷಣ ನಾಡಿನ ಜನತೆಗೆ ಕ್ಷಮೆಯಾಚಿಸಬೇಕು. ಅಲ್ಲದೆ ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಪ್ರತಿಕೃತಿ ದಹಿಸಲಾಯಿತು.
ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ನೇತೃತ್ವ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಬಿ.ಕೆ.ಶ್ರೀನಾಥ್, ಜಿ. ಧರ್ಮಪ್ರಸಾದ್, ಭೋವಿ ನಿಗಮದ ನಿರ್ದೇಶಕ ಜಿ. ಆನಂದ ಕುಮಾರ್, ಹಟ್ಟಿ ಚಿನ್ನದ ಗಣಿ ಕಂಪನಿ ಆಡಳಿತ ಮಂಡಳಿ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್, ನಗರಸಭಾ ಸದಸ್ಯರಾದ ವಿ. ಕದಿರೇಶ್, ಅನುಪಮ ಚನ್ನೆಶ್, ಮುಖಂಡರಾದ , ಎಂ. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಚನ್ನೆಶ್, ಯುವ ಮೋರ್ಚಾ ಅಧ್ಯಕ್ಷ ವಿಜಯ್‌ರಾಜ್, ಎಸ್‌ಸಿ ಮೋರ್ಚಾ ಅಧ್ಯಕ್ಷ ಪಿ. ಗಣೇಶ್‌ರಾವ್, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಆರ್.ಎಸ್. ಶೋಭಾ, ಮಹಿಳಾ ಮೋರ್ಚಾಅಧ್ಯಕ್ಷೆ ಶೋಭಾ ಪಾಟೀಲ್, ಕಾರ್ಯದರ್ಶಿ ಮಂಜುಳ, ಸುಲೋಚನಾ ಪ್ರಕಾಶ್, ಅನ್ನಪೂರ್ಣ ಸಾವಂತ್, ಹೇಮಾವತಿ ಕುಟ್ಟಿ, ಉಷಾ, ಕರುಣಾಕರ, ಆಟೋ ಮೂರ್ತಿ, ಚಂದ್ರು, ಓಬಿಸಿ ಅಧ್ಯಕ್ಷ ಸುಬ್ರಮಣಿ, ಕೆ.ಆರ್ ಸತೀಶ್, ರಾಮನಾಥ ಬರ್ಗೆ, ಬಿ.ಎಸ್ ಶ್ರೀನಾಥ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post