No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಭದ್ರಾವತಿ | ವಾಮಾಚಾರ ಹೆಸರಿನಲ್ಲಿ ಮಹಿಳೆಗೆ ವಂಚನೆ: ₹22.50 ಲಕ್ಷ ಮೌಲ್ಯದ ಚಿನ್ನ ವಶ

kalpa News by kalpa News
September 10, 2026
in News, ಭದ್ರಾವತಿ, ಶಿವಮೊಗ್ಗ
0
bhadravathi black magic cheating gold seized
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ (ಶಿವಮೊಗ್ಗ)  |

ವಾಮಾಚಾರವಾಗಿದೆ ಎಂದು ಮಹಿಳೆಯನ್ನು ನಂಬಿಸಿ, ಪೂಜೆ ಮಾಡುವ ನೆಪದಲ್ಲಿ ಸುಮಾರು 193 ಗ್ರಾಂ ತೂಕದ ಚಿನ್ನಾಭರಣ (Gold) ಹಾಗೂ ₹2 ಲಕ್ಷ ನಗದು ಪಡೆದುಕೊಂಡು ವಂಚಿಸಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಭದ್ರಾವತಿ (Bhadravati) ಹೊಸಮನೆ ಶಿವಾಜಿ ಸರ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು ₹22.50 ಲಕ್ಷ ಮೌಲ್ಯದ 161 ಗ್ರಾಂ ಚಿನ್ನಾಭರಣ ಹಾಗೂ ಚಿನ್ನದ ಗಟ್ಟಿ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾಮಾಚಾರದ ಹೆಸರಿನಲ್ಲಿ ಮಹಿಳೆಗೆ ಭಯ ಹುಟ್ಟಿಸಿದ ಆರೋಪ

ಸೆಪ್ಟೆಂಬರ್ 7, 2026ರಂದು ಭದ್ರಾವತಿಯ ಗಾಂಧಿನಗರ ನಿವಾಸಿ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಪ್ರಕಾರ, ಮುರಳಿ ಹಾಗೂ ಆತನ ಸಹೋದರ ರವಿ ಎಂಬುವವರು ಮಹಿಳೆಯನ್ನು ಸಂಪರ್ಕಿಸಿ, ತಮಗೆ ವಾಮಾಚಾರ ಪ್ರಯೋಗವಾಗಿದೆ. ಅದನ್ನು ತೆಗೆಸದೇ ಇದ್ದರೆ ಮಹಿಳೆ ಹಾಗೂ ಆಕೆಯ ಮಕ್ಕಳಿಗೆ ದೊಡ್ಡ ಮಟ್ಟದಲ್ಲಿ ಸಮಸ್ಯೆಯಾಗುತ್ತದೆ ಎಂದು ಹೇಳಿ ನಂಬಿಸಿದ್ದಾರೆ ಎನ್ನಲಾಗಿದೆ.

ನಂತರ ಆರೋಪಿತರು ಮಹಿಳೆಯ ಮನೆಗೆ ಬಂದು ಪೂಜೆ ನಡೆಸಿದ್ದು, ಪೂಜೆ ಮುಗಿದ ಬಳಿಕ ಚಿನ್ನಾಭರಣಗಳನ್ನು ತಮಗೆ ನೀಡುವಂತೆ ತಿಳಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಚಿನ್ನಾಭರಣಗಳನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಿ ಅಲ್ಲಿ ಪೂಜೆ ಮಾಡಿ ವಾಪಸ್ ನೀಡುವುದಾಗಿ ಹೇಳಿ ಮಹಿಳೆಯನ್ನು ನಂಬಿಸಿದ್ದಾರೆ ಎನ್ನಲಾಗಿದೆ.

ಈ ಮಾತುಗಳನ್ನು ನಂಬಿದ ಮಹಿಳೆ ಸುಮಾರು 193 ಗ್ರಾಂ ತೂಕದ ಚಿನ್ನಾಭರಣ ಹಾಗೂ ₹2 ಲಕ್ಷ ಹಣವನ್ನು ಆರೋಪಿತರಿಗೆ ನೀಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಳಿಕ ಚಿನ್ನಾಭರಣ ಹಾಗೂ ಹಣವನ್ನು ಪಡೆದುಕೊಂಡು ನಂಬಿಕೆ ದ್ರೋಹ ಮಾಡಿ ವಂಚಿಸಲಾಗಿದೆ ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.

Bhadravati: ಪ್ರಕರಣ ದಾಖಲು

ದೂರಿನ ಆಧಾರದ ಮೇಲೆ ಹೊಸಮನೆ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.155/2026ರಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)ಯ ಕಲಂ **316(2), 318(4) ಸಹಿತ 3(5)**ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರಕರಣದ ಆರೋಪಿಗಳು ಹಾಗೂ ಮಾಲು ಪತ್ತೆಗಾಗಿ ಭದ್ರಾವತಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಅವರ ಮೇಲ್ವಿಚಾರಣೆಯಲ್ಲಿ, ನಗರ ವೃತ್ತದ ಸಿಪಿಐ ನಾಗಮ್ಮ ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.

ತಂಡದಲ್ಲಿ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯ ಪಿಎಸ್ಐ ಸಿದ್ದಪ್ಪ ಎಂ.ಪಿ. ಹಾಗೂ ಸಿಬ್ಬಂದಿಗಳಾದ ಆದರ್ಶ ಶೆಟ್ಟಿ, ಮನ್ಸೂದ್ ಖಾನ್, ಆಸ್ಟೀನ್ ಜಾಯ್ ಫುಲ್, ಕಾಂತರಾಜ ಬಿ.ಎನ್., ಹಣಮಂತ ಅಮಾತಿ, ಶ್ರೀಧರ ಹಾಗೂ ಸುನೀತಾ ಅವರು ಇದ್ದರು.Kumadvathi College Shikariura

ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ತನಿಖಾ ತಂಡವು ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಆರೋಪಿತ ಮುರುಳಿ ಅಲಿಯಾಸ್ ಕರಿಯಾ, 31 ವರ್ಷ, ತಿಪ್ಲಾಪುರ ಕ್ಯಾಂಪ್, ಭದ್ರಾವತಿ, ಎಂಬಾತನನ್ನು ಬಂಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆಯ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತನು ಪಡೆದುಕೊಂಡಿದ್ದ ಚಿನ್ನಾಭರಣಗಳ ಪೈಕಿ ಕೆಲವು ಆಭರಣಗಳನ್ನು ಗಿರವಿ ಅಂಗಡಿಯಲ್ಲಿ ಅಡವಿಟ್ಟಿದ್ದ ಹಾಗೂ ಇನ್ನೂ ಕೆಲವು ಚಿನ್ನವನ್ನು ಕರಗಿಸಿ ಚಿನ್ನದ ಗಟ್ಟಿಯಾಗಿ ಮಾಡಿಕೊಂಡು ಮನೆಯಲ್ಲಿ ಬಚ್ಚಿಟ್ಟಿದ್ದ ಎನ್ನಲಾಗಿದೆ.

Also read>> ಊರಿಗೆ ಮರಳಲಾಗದೆ ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಯುವತಿಗೆ ಅಕ್ಕ ಪಡೆ ನೆರವು

ಪೊಲೀಸರು ಕಾರ್ಯಾಚರಣೆ ನಡೆಸಿ ಒಟ್ಟು ಸುಮಾರು 161 ಗ್ರಾಂ ತೂಕದ ಚಿನ್ನಾಭರಣ ಹಾಗೂ ಚಿನ್ನದ ಗಟ್ಟಿಯನ್ನು, ಅಂದಾಜು ₹22.50 ಲಕ್ಷ ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಕರಣದಲ್ಲಿ ಭಾಗಿಯಾಗಿರುವ ಇತರರ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪೊಲೀಸ್ ಅಧಿಕಾರಿಗಳಿಂದ ತನಿಖಾ ತಂಡಕ್ಕೆ ಪ್ರಶಂಸೆ

ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿ, ಚಿನ್ನಾಭರಣ ಹಾಗೂ ಚಿನ್ನದ ಗಟ್ಟಿಯನ್ನು ಪತ್ತೆಹಚ್ಚಿದ ಪೊಲೀಸ್ ತಂಡದ ಕಾರ್ಯಾಚರಣೆಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ., ಐಪಿಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರಿಯಪ್ಪ ಅವರು ಪ್ರಶಂಸೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Kalahamsa Infotech private limited

PES Shivamogga
Kalpa News Advertising Disclaimer

Tags: BhadravatiBlack magicGold seizedಭದ್ರಾವತಿವಾಮಾಚಾರ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಊರಿಗೆ ಮರಳಲಾಗದೆ ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಯುವತಿಗೆ ಅಕ್ಕ ಪಡೆ ನೆರವು

Next Post

ಭಾರತೀಯ ಯುವಜನತೆಯಲ್ಲಿ ಹೆಚ್ಚಿದ ಯೋಜಿತ ಸಾಲದ ಒಲವು

kalpa News

kalpa News

Next Post
growing-preference-planned-borrowing-indian-youth

ಭಾರತೀಯ ಯುವಜನತೆಯಲ್ಲಿ ಹೆಚ್ಚಿದ ಯೋಜಿತ ಸಾಲದ ಒಲವು

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL