ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿ ಹಳೇನಗರದ ಕನಟ ಮಂಟಪದಲ್ಲಿ ಹುಟ್ಟುಹಬ್ಬ ಆಚರಿಸಿದ ನಾಲ್ವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಕೋವಿಡ್19 ಹಿನ್ನೆಲೆಯಲ್ಲಿ ಈಗಾಗಲೇ ಲಾಕ್ ಡೌನ್ ಜಾರಿಯಲ್ಲಿದ್ದು, ಸಾರ್ವಜನಿಕವಾಗಿ ಯಾವುದೇ ರೀತಿಯ ಆಚರಣೆ ಮಾಡುವಂತಿಲ್ಲ. ಆದರೆ, ಮೊಹಮ್ಮದ್ ಷರೀಫ್ ಹಾಗೂ ಆತನ ಮೂವರು ಸ್ನೇಹಿತರು ಹಳೇನಗರದ ಕನಕ ಮಂಟಪದಲ್ಲಿ ಹುಟ್ಟುಹಬ್ಬ ಆಚರಿಸುತ್ತಿದ್ದರು. ಈ ವೇಳೆ ಗಸ್ತಿನಲ್ಲಿದ್ದ ಪಿಎಸ್’ಐ ಅವರು ಕರ್ನಾಟಕ ಎಪಿಡೆಮಿಕ್ ಡಿಸೀಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















