ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಲ್ಲಿನ ವಿಐಎಸ್ಎಲ್ ಕ್ವಾಟ್ರಸ್ ಪ್ರದೇಶದಲ್ಲಿ ಚಿರತೆಯೊಂದು ಪ್ರತ್ಯಕ್ಷಗೊಂಡಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಇಂದು ಮುಂಜಾನೆ ಇಲ್ಲಿನ ವಿಐಎಸ್ಎಲ್ ಆಸ್ಪತ್ರೆ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿರುವ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದಾಕ್ಷಣ ಸ್ಥಳಕ್ಕೆ ದೌಡಾಯಿಸಿರುವ ಇಲಾಖೆ ಸಿಬ್ಬಂದಿಗಳು ಈ ಪ್ರದೇಶದಲ್ಲಿ ಚಿರತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಈ ಹಿಂದೆ ಕೆಲವು ಬಾರಿ ಕಾಖರ್ಾನೆಯ ಹಿಂಭಾಗ ಹಾಗೂ ಖಾಲಿ ಇರುವ ಕ್ವಾಟ್ರಸ್’ಗಳಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಈಗ ಸದ್ಯ ಖಾಲಿ ಇರುವ ಕ್ವಾಟ್ರಸ್ ಮನೆಗಳ ಪ್ರದೇಶದಲ್ಲಿ ಇದು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.
ಈ ಪ್ರದೇಶದಲ್ಲಿ ಸಾವಿರಾರು ಮಂದಿ ವಾಸಿಸುತ್ತಿದ್ದು, ಅಂಗಡಿ ಮುಂಗಟ್ಟು, ಶಾಲೆ, ದೇವಾಲಯ ಸಹ ಇದೆ. ಇಂತಹ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿರುವುದು ಆತಂಕಕ್ಕೆ ಕಾರಣವಾಗಿದ್ದು, ಸದ್ಯ ಇಡಿಯ ಪ್ರದೇಶದಲ್ಲಿ ಹುಡುಕಾಟ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಈ ಪ್ರದೇಶದಲ್ಲಿರುವ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.
ಇನ್ನು, ಸ್ಥಳದಲ್ಲಿ ನೂರಾರು ಮಂದಿ ದೊಣ್ಣೆಗಳನ್ನು ಹಿಡಿದುಕೊಂಡು ಜಮಾಯಿಸಿದ್ದು, ಅರಣ್ಯ ಇಲಾಖೆಯ ಕಾಯರ್ಾಚರಣೆಯೂ ಸಹ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















