ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ವಿಶ್ವ ಮಹಿಳಾ ದಿನಾಚರಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿಯವರ ಅಶ್ಲೀಲ ವೀಡಿಯೋ ಪ್ರಕರಣ ಬೆಳಕಿಗೆ ಬಂದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಮಹಿಳಾ ಘಟಕ) ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ಹೇಳಿದ್ದಾರೆ.
ಯಡಿಯೂರಪ್ಪನವರ ಸರ್ಕಾರಕ್ಕೆ ಮಹಿಳೆಯರ ಮೇಲೆ ಗೌರವವಿಲ್ಲ. ಸದನದಲ್ಲಿ ಅಶ್ಲೀಲ ಚಿತ್ರ ವೀಕ್ಷಣೆ ಮಾಡಿದವರಿಗೆ ಸಚಿವ ಸ್ಥಾನ ನೀಡಿರುವುದು ದೌರ್ಭಾಗ್ಯದ ಸಂಗತಿಯಾಗಿದ್ದು, ಇದೀಗ ಸಚಿವ ರಮೇಶ್ ಜಾರಕಿಹೊಳಿಯವರು ಯುವತಿಯೊಬ್ಬರಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ನಡೆಸುವ ಮೂಲಕ ವಂಚಿಸಿರುವುದು ನಾಡಿನ ಘನತೆಗೆ ಕಪ್ಪು ಚುಕ್ಕಿಯಾಗಿದೆ. ತಕ್ಷಣ ರಮೆಶ್ ಜಾರಕಿಹೊಳಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಜಾರಕಿಹೊಳಿಯವರನ್ನು ತಕ್ಷಣ ಶಾಸಕ ಸ್ಥಾನದಿಂದಲೂ ವಜಾಗೊಳಿಸಬೇಕೆಂದು ಆಗ್ರಹಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post