ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕು ಪೌರ ಸೇವಾ ನೌಕರರ ಸಂಘದ ಅಧ್ಯಕ್ಷರಾಗಿ ಎಸ್. ಚೇತನ್ ಕುಮಾರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ಪರಿಷತ್ ಸಭೆಯಲ್ಲಿ ಚೇತನ್ ಕುಮಾರ್ ಅವರು ರಾಜ್ಯ ಸಂಘದ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ.
ಅಲ್ಲದೇ ಭದ್ರಾವತಿ ಶಾಖೆಯ ಅಧ್ಯಕ್ಷರಾಗಿ ಸರ್ವಾನುಮತದಿಂದ ಚೇತನ್ ಅವರು ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ಚೇತನ್ ಕುಮಾರ್ ಅವರನ್ನು ಶಾಸಕ ಬಿ.ಕೆ. ಸಂಗಮೇಶ್ MLA BKSangameshwar ಅವರು ತಮ್ಮ ನಿವಾಸದಲ್ಲಿ ಅಭಿನಂದಿಸಿ, ಶುಭ ಹಾರೈಸಿದರು.
Also read: ಮಹಿಳಾ ಶಕ್ತಿ ಪ್ರಜ್ವಲಿಸಲಿಸಬೇಕು: ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಸಲಹೆ
ಸಂಘದ ಸದಸ್ಯರ ಶ್ರೇಯೋಭಿವೃದ್ಧಿಗಾಗಿ ಸದಾಕಾಲ ಶ್ರಮಿಸುವಂತೆ ಶಾಸಕರು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post