ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕಾರೇಹಳ್ಳಿಯಲ್ಲಿ ನಡೆಯಲಿರುವ 25ನೆಯ ರಾಜ್ಯಮಟ್ಟದ ಕ್ರೀಡಾಕೂಟದ ಉದ್ಘಾಟನೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಾಲೂಕಿಗೆ ಆಗಮಿಸುತ್ತಿದ್ದಾರೆ.
ಡಿಸೆಂಬರ್ 1ರ ನಾಳೆ ಮಧ್ಯಾಹ್ನ 1.15ಕ್ಕೆ ಬೆಂಗಳೂರಿನ ಎಚ್’ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಡಲಿರುವ ಮುಖ್ಯಮಂತ್ರಿಗಳು 2.35ಕ್ಕೆ ಭದ್ರಾವತಿ ಹೆಲಿಪ್ಯಾಡ್’ಗೆ ಆಗಮಿಸಲಿದ್ದಾರೆ.
ಅಲ್ಲಿಂದ ರಸ್ತೆ ಮಾರ್ಗದಲ್ಲಿ ಕಾರೇಹಳ್ಳಿಯ ಬಿಜಿಎಸ್ ಕೇಂದ್ರೀಯ ವಿದ್ಯಾಲಯ ಆವರಣದಲ್ಲಿ ಶ್ರೀಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಅಂತರ್ ಶಾಲಾ ಕಾಲೇಜುಗಳ ರಜತ ಚುಂಚಾದ್ರಿ ಕ್ರೀಡೋತ್ಸವ-2022, 25ನೆಯ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.
4.15ಕ್ಕೆ ಭದ್ರಾವತಿ ಹೆಲಿಪ್ಯಾಡ್’ನಿಂದ ಹೆಲಿಪ್ಯಾಡ್ ಮೂಲಕ ಹೊರಟು 5.35ಕ್ಕೆ ಬೆಂಗಳೂರಿನ ಎಚ್’ಎಎಲ್ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಬಿ.ಪಿ. ಚನ್ನಬಸವೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















