ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನ ಕಾರೇಹಳ್ಳಿ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಅಂತರ್ ಶಾಲಾ ಕಾಲೇಜುಗಳ ರಜತ ಚುಂಚಾದ್ರಿ ಕ್ರೀಡೋತ್ಸವ, 25ನೇ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಚಾಲನೆ ನೀಡಿದರು.
ಡಿ.3ರವರೆಗೆ ನಡೆಯಲಿರುವ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಇದಕ್ಕೂ ಮೊದಲು ವಿದ್ಯಾರ್ಥಿ ವಸತಿ ನಿಲಯದ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಶ್ರೀ ಕ್ಷೇತ್ರದ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಗೃಹ ಸಚಿವ ಅರಗಜ್ಞಾನೇಂದ್ರ, ಆರೋಗ್ಯ ಸಚಿವ ಡಾ. ಡಿ. ಸುಧಾಕರ್, ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಸಂಸದ ಬಿ.ವೈ ರಾಘವೇಂದ್ರ, ಶಾಸಕ ಬಿ.ಕೆ ಸಂಗಮೇಶ್ವರ್, ವಿಧಾನಪರಿಷತ್ ಸದಸ್ಯ ಎಸ್.ಎಸ್ ಭೋಜೇಗೌಡ, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ರಾಜ್ಯದ ವಿವಿಧೆಡೆಗಳಿಂದ ಕ್ರೀಡಾಕೂಟಕ್ಕೆ ಕ್ರೀಡಾಪಟುಗಳು ಆಗಮಿಸಿದ್ದು, ಡಿ.3ರಂದು ಮಧ್ಯಾಹ್ನ 12 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.












Discussion about this post