No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ಮತಾಂತರ ನಿಷೇಧ ಕಾಯ್ದೆಯನ್ನು ಕೈಬಿಡುವಂತೆ ಕ್ರಿಶ್ಚಿಯನ್ ಸಂಘಟನೆ ಮನವಿ

kalpa News by kalpa News
November 20, 2021
in ಭದ್ರಾವತಿ
0
ಭದ್ರಾವತಿ: ಮತಾಂತರ ನಿಷೇಧ ಕಾಯ್ದೆಯನ್ನು ಕೈಬಿಡುವಂತೆ ಕ್ರಿಶ್ಚಿಯನ್ ಸಂಘಟನೆ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ರಾಜ್ಯ ಸರ್ಕಾರ ಜಾರಿಗೆ ತರಲು ತಯಾರಾಗಿರುವ ಮತಾಂತರ ನಿಷೇಧ ಕಾಯ್ದೆಯನ್ನು ಕೈಬಿಡಬೇಕು ಹಾಗೂ ಕ್ರೈಸ್ತ ಸಮುದಾಯದ ಚರ್ಚ್‌ಗಳು ಮತ್ತು ಧಾರ್ಮಿಕ ಸಂಘ ಸಂಸ್ಥೆಗಳ ಗಣತಿಯನ್ನು ನಡೆಸಬೇಕೆಂಬ ಸರ್ಕಾರದ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ವತಿಯಿಂದ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಮತಾಂತರದ ಕುರಿತ ಚರ್ಚೆ ಬಹಳ ಬಿರುಸಿನಿಂದ ಇತ್ತೀಚೆಗೆ ನಡೆಯುತ್ತಿದೆ. ಸರ್ಕಾರವು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಲು ಚಿಂತನೆ ನಡೆಸುತ್ತಿದೆ. ಇದಕ್ಕೆ ಕರ್ನಾಟಕದ ಸಮಸ್ತ ಕ್ರೈಸ್ತ ಸಮುದಾಯವು ಒಮ್ಮನಸಿನಿಂದ ವಿರೋಧಿಸುತ್ತದೆ. ಈಗಾಗಲೇ ನಮ್ಮ ಸಂವಿಧಾನವು ತನ್ನ ಪ್ರಜೆಗಳಿಗೆ ಯಾವುದೇ ಧರ್ಮವನ್ನು ಪ್ರತಿಪಾದಿಸಲು, ಆಚರಿಸಲು ಮತ್ತು ಅದನ್ನು ಪ್ರಕಟಿಸಲು ಹಕ್ಕುಗಳನ್ನು ನೀಡಿದೆ. ಹೀಗಿರುವಲ್ಲಿ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಅಗತ್ಯವಾದರೂ ಏನು? ಯಾವುದೋ ಒಂದೆರಡು ಘಟನೆಗಳನ್ನು ಆಧಾರವಾಗಿಟ್ಟುಕೊಂಡು, ಇಡೀ ಕ್ರೈಸ್ತ ಸಮುದಾಯವನ್ನು ದೂರುವುದು ಸರಿಯಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ.

ಇನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ತನ್ನ ಸಭೆಯೊಂದರಲ್ಲಿ ರಾಜ್ಯದಲ್ಲಿ ಕ್ರೈಸ್ತ ಸಮುದಾಯದ ಚರ್ಚ್‌ಗಳ ಮತ್ತು ಧಾರ್ಮಿಕ ಸಂಘ-ಸಂಸ್ಥೆಗಳ ಗಣತಿಯನ್ನು ನಡೆಸಬೇಕೆಂದು ಆದೇಶಿಸಿದೆ. ಈ ಗಣತಿಯ ಉದ್ದೇಶವಾದರೂ ಏನು? ಸರ್ಕಾರವು ಗಣತಿ ಮಾಡಬೇಕೆಂದರೆ ಮಾಡಲಿ. ಆದರೆ ನಮ್ಮ ಆಕ್ಷೇಪಣೆ ಇಲ್ಲ. ಆದರೆ ನಮ್ಮ ಸಮುದಾಯವನ್ನು ಮಾತ್ರ ಗುರಿಯಾಗಿಸಿ ಗಣತಿಯನ್ನು ನಡೆಸಲು ಆದೇಶಿಸಿರುವುದೇಕೆ? ಅದಲ್ಲದೆ, ನಮ್ಮ ಚರ್ಚುಗಳ ವಿವರಗಳೆಲ್ಲವೂ ಈಗಾಗಲೇ ಸರ್ಕಾರದ ಬಳಿ ಇರುವಾಗ ಮತ್ತೊಮ್ಮೆ ಗಣತಿ ನಡೆಸುವ ಅಗತ್ಯವಾದರೂ ಏನು? ಪ್ರಶ್ನೆ ಮಾಡಿದೆ.

ಭಾರತದ ಮೊದಲ ಜನಗಣತಿಯಿಂದ ಇಲ್ಲಿಯವರೆಗೂ ಸಹ ದೇಶದಲ್ಲಿ ಕ್ರೈಸ್ತ ಸಮುದಾಯದ ಜನಸಂಖ್ಯೆ ಅಂಕಿ-ಅಂಶಗಳು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಬಳಿ ಇವೆ. ಭಾರತದಲ್ಲಿ ದೊಡ್ಡ ಮಟ್ಟಿಗೆ ಮತಾಂತರ ನಡೆಯುತ್ತಿದೆ ಎಂದು ಆರೋಪಿಸುವವರು ಈ ಅಂಕಿ-ಅಂಶಗಳನ್ನು ಒಮ್ಮೆ ಪರಿಶೀಲಿಸಿದರೆ ಎಲ್ಲರಿಗೂ ಸತ್ಯಾಂಶವು ಅರಿವಾಗುವುದು. ಮತಾಂತರವು ನಿಜವೇ ಆಗಿದ್ದರೆ, ನಮ್ಮ ಸಮುದಾಯದ ಸಂಖ್ಯೆ ಇಷ್ಟೊತ್ತಿಗೆ ಅಧಿಕವಾಗಿರಬೇಕಿತ್ತು. ಆದರೆ, ದೇಶದ ಸ್ವಾತಂತ್ರ್ಯದ ನಂತರವೂ ಸಹ ಜನಸಂಖ್ಯೆಯಲ್ಲಿ ನಮ್ಮ ಸಮುದಾಯದ ಸಂಖ್ಯೆ ಕೇವಲ ಶೇ.೮ರಷ್ಟು ಮಾತ್ರವಿದೆ ಎಂದು ತಿಳಿಸಲಾಗಿದೆ.

ಇಂದು ನಮ್ಮ ರಾಜ್ಯ ಹಾಗೂ ರಾಷ್ಟ್ರದಲ್ಲಿ ಕ್ರೈಸ್ತ ಸಮುದಾಯವು ಸಾವಿರಾರು ಶಾಲಾ ಕಾಲೇಜುಗಳ ಮತ್ತು ಆಸ್ಪತ್ರೆಗಳ ಮೂಲಕ ತನ್ನ ನಿಸ್ವಾರ್ಥ ಸೇವೆಯನ್ನು ಮಾಡುತ್ತಿದೆ. ಇತಿಹಾಸದಲ್ಲಿ ಕ್ರೈಸ್ತ ಶಾಲಾ ಕಾಲೇಜುಗಳಲ್ಲಿ ಓದಿದವರು ಅಥವಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡ ಕ್ರೈಸ್ತೇತರರಲ್ಲಿ ಯಾರಾದರೂ ಒಬ್ಬರು ತಮ್ಮನ್ನು ಮತಾಂತರಗೊಳಿಸಲಾಗಿದೆ ಎಂಬುದನ್ನು ಸಾಬೀತುಪಡಿಸಲಿ. ಈ ನಿಟ್ಟಿನಲ್ಲಿ ಮತಾಂತರ ನಿಷೇಧ ಕಾಯ್ದೆ ಎಂಬುದು ಜಾರಿಯಾದರೆ, ಅದು ಯಾವ ಒಳಿತನ್ನೂ ಮಾಡುವುದಿಲ್ಲ. ಬದಲಿಗೆ, ಸದರಿ ಕಾಯಿದೆ ಕೋಮುವಾದಿಗಳ ಕೈಗೆ ಸಿಕ್ಕಿದರೆ, ಅದನ್ನು ಅವರು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯವೆಸಗಲು ಸಾಧ್ಯವಾಗಬಹುದು ಮತ್ತು ಆ ಮೂಲಕ ಸಮಾಜದಲ್ಲಿ ಶಾಂತಿಯನ್ನು ಕದಡಿಸಲು ಪ್ರಯತ್ನಿಸಬಹುದು ಎಂಬುದರಲ್ಲಿ ಯಾವ ಸಂಶಯವೂ ಇಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಫಾ. ಲಾನ್ಸಿ ಡಿಸೋಜ, ಫಾ. ಸ್ಟೀವನ್ ಡೇಸಾ, ಅಂತೋಣಿ ವಿಲ್ಸನ್, ಫಾ. ಸಂತೋಷ್ ಇರೇರಾ, ಫಾ. ವೀನಸ್ ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Aana kannada MovieBhadravathiChristian organizationKannada NewsKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಕ್ರಿಶ್ಚಿಯನ್ ಸಂಘಟನೆಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಿಲ್ಲಾ ಮಟ್ಟದ ಯುವಜನೋತ್ಸವ: ಉತ್ತಮ ಸ್ಪರ್ಧೆ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ – ಡಿಸಿ ಆಶಯ

Next Post

ವಿಧಾನ ಪರಿಷತ್ ಚುನಾವಣಾ ಬಿಜೆಪಿ ಅಭ್ಯರ್ಥಿಯಾಗಿ ಡಿ.ಎಸ್. ಅರುಣ್ ಆಯ್ಕೆ

kalpa News

kalpa News

Next Post
ವಿಧಾನ ಪರಿಷತ್ ಚುನಾವಣಾ ಬಿಜೆಪಿ ಅಭ್ಯರ್ಥಿಯಾಗಿ ಡಿ.ಎಸ್. ಅರುಣ್ ಆಯ್ಕೆ

ವಿಧಾನ ಪರಿಷತ್ ಚುನಾವಣಾ ಬಿಜೆಪಿ ಅಭ್ಯರ್ಥಿಯಾಗಿ ಡಿ.ಎಸ್. ಅರುಣ್ ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL