ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಆಪ್ತ ಸಹಾಯಕ ಈಶ್ವರ್ ಅವರು ನಿನ್ನೆ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತರಾಗಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕೂಡ್ಲಿಗೆರೆಗೆ ತೆರಳಿ ಕೆಲಸ ಮುಗಿಸಿಕೊಂಡು ರಾತ್ರಿ 9 ಗಂಟೆ ವೇಳೆಗೆ ಈಶ್ವರ್ ಅವರು ಭದ್ರಾವತಿಗೆ ಮರಳುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದರು.
ಬೈಕ್’ಗೆ ಲಾರಿ ಡಿಕ್ಕಿ ಹೊಡೆದ ಭೀಕರ ದೃಶ್ಯ ಇಲ್ಲಿನ ಮನೆಯೊಂದರ ಮುಂದೆ ಹಾಕಲಾಗಿರುವ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
Also read: ಅಂತಹ ಮಕ್ಕಳನ್ನು ಹೊರಹಾಕಬೇಡಿ, ಶಿಕ್ಷಣ ಕೊಡಿ: ಕಣ್ಣೀರಿಟ್ಟ ಮಂಜಮ್ಮ ಜೋಗತಿ
ಘಟನೆ ಕುರಿತಂತೆ ದುಃಖ ವ್ಯಕ್ತಪಡಿಸಿರುವ ಶಾಸಕ ಬಿ.ಕೆ. ಸಂಗಮೇಶ್ವರ್, ನನ್ನ ಆಪ್ತಸಹಾಯಕ, ನನ್ನ ಬೆನ್ನೆಲುಬಾಗಿ ನಿಂತಿದ್ದ ಈಶ್ವರ್ ರಸ್ತೆ ಅಪಘಾತದಲ್ಲಿ ಮೃತರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಂಬನಿ ಮಿಡಿದಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















